ಬೆಂಗಳೂರು: ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪಕ್ಕೆ ಗುರಿಯಾಗಿದ್ದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ಜಾಮೀನು ನೀಡಿ ಕೋರ್ಟ್ ಆದೇಶಿಸಿದೆ.
3 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗಿರುವ ಹಿನ್ನೆಲೆ ಕೋರ್ಟ್ ಆದೇಶ ಹೊರಡಿಸಿದೆ. 25,000 ರೂಪಾಯಿ ಬಾಂಡ್ ಹಾಗೂ ಶ್ಯೂರಿಟಿ ನೀಡಲು ನ್ಯಾಯಾಧೀಶ ಜೆ ಪ್ರೀತ್ ಸೂಚನೆ ನೀಡಿದ್ದಾರೆ.
ತಪ್ಪು ಮಾಹಿತಿ ನೀಡಿದ ಆರೋಪದ ಮೇರೆಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ, ಗರುಡಾಚಾರ್ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಇಂದು ಆದೇಶ ಹೊರಡಿಸಿತ್ತು.
ಮೆವರಿಕ್ ಹೋಲ್ಡಿಂಗ್ಸ್ ನಲ್ಲಿ ಎಂಡಿ ಯಾಗಿದ್ದರೂ ಹೂಡಿಕೆದಾರ ಎಂದು ನಮೂದಿಸಿದ್ದರು ಹಾಗೂ ಪತ್ನಿ ನಿರ್ದೇಶಕರಾಗಿರುವುದನ್ನು ನಮೂದಿಸದ ಆರೋಪ. ಪತ್ನಿಯ ಬ್ಯಾಂಕ್ ವಿವರ ನೀಡದೇ ಮುಚ್ಚಿಟ್ಟ ಆರೋಪ. ಈ ಹಿನ್ನೆಲೆ ಹೆಚ್.ಜಿ.ಪ್ರಶಾಂತ್ ಅವರು ದೂರು ದಾಖಲಿಸಿದ್ದರು.
BIGG NEWS : ‘ಟೆರೆರಿಸ್ಟ್’ ಜೊತೆ ಕಾದಾಡಿದ್ದ ಆರ್ಮಿ ಡಾಗ್ ‘ಜೂಮ್’ ವಿಧಿವಶ |Army Dog Zoom Passed Away
ಗರ್ಭಾವಸ್ಥೆಯಲ್ಲಿ ಪ್ರಯಾಣ ಮಾಡುವುದು ಸುರಕ್ಷಿತವೇ? ʼವೈದ್ಯರ ಸಲಹೆʼಗಳೇನು ಗೊತ್ತಾ? ಇಲ್ಲಿದೆ ಮಾಹಿತಿ