ಚಿಕ್ಕಮಗಳೂರು : ಮುಂದಿನ ನವೆಂಬರ್ 13 ರೊಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು ಎಂದು ಶ್ರೀರಾಮ ಸೇನೆ, ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಮುಂದಿನ ನವೆಂಬರ್ 13 ರಂದು ದತ್ತಪೀಠ ಅಭಿಯಾನಕ್ಕೆ ದಿನಾಂಕ ನಿಗದಿ ಮಾಡಿರುವ ಶ್ರೀರಾಮ ಸೇನೆ, ಆ ದಿನದ ಒಳಗಾಗಿ ದತ್ತಪೀಠಕ್ಕೆ ಅರ್ಚಕರ ನೇಮಕವಾಗಬೇಕು, ಇಲ್ಲವಾದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯಾದ ಸಂದರ್ಭದಲ್ಲಿ ಉಂಟಾದ ಆಕ್ರೋಶ ದತ್ತಪೀಠದಲ್ಲಿ ನಡೆಯುತ್ತದೆ ಎಂದು ಶ್ರೀರಾಮ ಸೇನೆ ರಾಜ್ಯ ಸಂಚಾಲಕ ಗಂಗಾಧರ್ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.
ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಇತ್ತೀಚೆಗೆ ಆದೇಶ ಹೊರಡಿಸಿದೆ.
ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಪೂಜಾವಿಧಿ ನಡೆಸಲು ಮುಜಾವರ್ ಹಾಗೂ ಅರ್ಚಕರಿಗೆ ಅವಕಾಶ ನೀಡಲಾಗಿದೆ’ ಎಂದು ಸಂಪುಟದಲ್ಲಿ ನಿರ್ಧರಿಸಲಾಗಿತ್ತು.ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯವು ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಲು ಮುಜಾವರ್ ಜೊತೆ ಆಗಮಶಾಸ್ತ್ರ ಗೊತ್ತಿರುವ ಹಿಂದೂ ಅರ್ಚಕರನ್ನು ನೇಮಿಸಲು ಸರ್ಕಾರ ತೀರ್ಮಾನಿಸಿತ್ತು. ಈ ಸಂಬಂಧ ಕಳೆದ ಆಗಸ್ಟ್ 19 ರಂದು ಸುತ್ತೋಲೆ ಹೊರಡಿಸಿದ್ದು, ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಪ್ರತಿನಿಧಿಗಳು ಇರುವ ವ್ಯವಸ್ಥಾಪನಾ ಸಮಿತಿ ರಚಿಸಬೇಕು. ಅರ್ಚಕ ಮತ್ತು ಮುಜಾವರ್ ಅವರನ್ನು ಈ ವ್ಯವಸ್ಥಾಪನಾ ಸಮಿತಿಯಿಂದಲೇ ನೇಮಿಸಬೇಕು ಎಂದು ಸೂಚನೆ ನೀಡಿತ್ತು.
‘ಪ್ರತಿಭಾ ಪುರಸ್ಕಾರ’ : ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ
ಹೂವಿನಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ – CM ಬಸವರಾಜ ಬೊಮ್ಮಾಯಿ