ಹಾಸನ : ಅ. 13 ರಿಂದ ಹಾಸನಾಂಬೆ ದೇವಾಲಯದ ಗರ್ಭಗುಡಿ ಓಪನ್ ಆಗಿದ್ದು. ಹಾಸನಾಂಬೆ ದೇವಿಯ ಪವಾಡ ಕಂಡು ಜನರು ಪಾವನರಾಗಿದ್ದಾರೆ.
ವರ್ಷಕೊಮ್ಮೆ ತೆರಯುವ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲನ್ನು ತೆರೆಯುವ ಮೂಲಕ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಇಂದಿನಿಂದ ಅ.27ರವರೆಗೂ ದೇಗುಲದ ಬಾಗಿಲು ತೆರೆದಿರಲಿದೆ.
ಆರದ ದೀಪ, ಬಾಡದ ಹೂ
ಆಶ್ವೀಜ ಮಾಸದ ಮೊದಲ ಗುರುವಾರ ನಿನ್ನೆ ಮಧ್ಯಾಹ್ನ 12.12 ಕ್ಕೆ ಅರಸು ವಂಶಸ್ಥ ನಂಜರಾಜೆ ಅರಸ್ ಸಂಪ್ರದಾಯದಂತೆ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಹಲವು ಗಣ್ಯರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಿತು. ಈ ವೇಳೆ ವರ್ಷದ ಹಿಂದೆ ಹಚ್ಚಿಟ್ಟದ್ದ ದೀಪ ಇನ್ನು ಉರಿಯುತ್ತಿತ್ತು, ಹಾಗೂ ಅಲಂಕರಿಸಿದ ಹೂಗಳು ಕೂಡ ಬಾಡದೇ ಹಾಳಾಗಿರಲಿಲ್ಲ, ಈ ಪವಾಡ ಕಂಡು ಜನರು ಪಾವನರಾಗಿದ್ದಾರೆ.
ಇನ್ನೂ, ಇಂದು ಅ. 14 ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಮುಂಜಾನೆಯೇ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ಭಕ್ತರು ಹಾಸನಾಂಬೆಯ ದರ್ಶನ ಪಡೆಯಲು ಸರದಿಯ ಸಾಲಿನಲ್ಲಿ ನಿಂತಿದ್ದಾರೆ.ಕಿಲೋಮೀಟರ್ ವರೆಗೂ ಭಕ್ತರ ಸರದಿ ಸಾಲು ಹರಿದಿದೆ.
.ನಿನ್ನೆ ಮೊದಲ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದರೂ, ಬೆಳಗ್ಗೆಯಿಂದಲೇ ಸಾವಿರಾರು ಮಂದಿ ದೇವಾಲಯದ ಒಳ-ಹೊರಗೆ ಜಮಾಯಿಸಿದ್ದರು. ಕೆಲವರು ಸರತಿ ಸಾಲಿನಲ್ಲಿ ನಿಂತಿದ್ದರು. ಕಡೆಗೆ ಆಗಮಿಸಿದ್ದ ಎಲ್ಲರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಇಂದಿನಿಂದ ಭಕ್ತರಿಗೆ ಹಾಸನಾಂಬೆ ದರ್ಶನ ಭಾಗ್ಯ : ಕಿಲೋಮೀಟರ್ ವ್ಯಾಪಿಸಿದ ಭಕ್ತರ ಸರದಿಯ ಸಾಲು |Hasanambe Temple