ಬೆಂಗಳೂರು: ಕಳೆದ ಕೆಲ ದಿನಗಳಿಂದ ಯಡಬಿಡದೇ ಸುರಿಯುತ್ತಿರುವಂತ ಮಳೆಯಿಂದಾಗಿ ( Rain ) ಅನೇಕ ಜಿಲ್ಲೆಗಳಲ್ಲಿ ನೆರೆ, ಪ್ರವಾಹದ ಭೀತಿ ಉಂಟಾಗಿದೆ. ಅನೇಕ ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಪರಿಹಾರ ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರದಿಂದ ( Karnataka Government ) 124 ಕೋಟಿ ಅನುದಾವನ್ನು ಬಿಡುಗಡೆ ಮಾಡಲಾಗಿದೆ.
BIGG NEWS: ಹಾಸನಾಂಬೆ ದರ್ಶನಕ್ಕೆ ಮಳೆರಾಯ ಅಡ್ಡಿ; ಭಕ್ತರ ಸಂಖ್ಯೆ ಗಣನೀಯ ಇಳಿಕೆ
ಈ ಕುರಿತಂತೆ ಕಂದಾಯ ಇಲಾಖೆಯ ( Revenue Department ) ಮೂಲಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಿಂದಾಗಿ ( Heavy Rain ) ಹಾನಿ ಉಂಟಾಗಿದೆ. ಈ ಜಿಲ್ಲೆಗಳಲ್ಲಿ ತ್ವರಿತ ಪರಿಹಾರ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ 124 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದಿದೆ.
ಅಂದಹಾಗೇ ರಾಜ್ಯ ಸರ್ಕಾರವು ಕಂದಾಯ ಇಲಾಖೆಯ ಮೂಲಕ ಡಿಸಿಗಳ ಪಿಡಿ ಖಾತೆಗೆ 124 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಈ ಬಿಡುಗಡೆ ಮಾಡಿರುವಂತ ಅನುದಾನದಲ್ಲಿ ಮಳೆಯಿಂದಾಗಿ ಉಂಟಾಗಿರುವಂತ ಹಾನಿಯ ಪರಿಹಾರ ಕಾಮಗಾರಿಯನ್ನು ಕೈಗೊಳ್ಳುವಂತೆ ಸೂಚಿಸಿದೆ.
BREAKING NEWS: ಓಲಾ, ಊಬರ್ಗೆ ಬಿಗ್ ರಿಲೀಫ್; ಸಾರಿಗೆ ಇಲಾಖೆ ಆದೇಶಕ್ಕೆ ಕೋರ್ಟ್ ಮಧ್ಯಂತರ ತಡೆ