ಶಿವಮೊಗ್ಗ : ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಅಕ್ಟೋಬರ್ 17 ಮತ್ತು 19ರಂದು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಹೇಳಿದೆ.
ಈ ಕುರಿತಂತೆ ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ( MESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕುಂಸಿ, ಆಯನೂರು, ಹಾರ್ನಳ್ಳಿ ಶಾಖಾ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 17 ಹಾಗೂ 19 ರಂದು ಎರಡು ದಿನಗಳ ಬೆಳಿಗ್ಗೆ 09 ರಿಂದ ಸಂಜೆ 6.30 ರವರೆಗೆ ಕುಂಸಿ, ಬಾಳೆಕೊಪ್ಪ, ಜೋರಡಿ, ತುಪ್ಪೂರು, ಕೋಣಿಹೂಸೂರು, ಹೊರಬೈಲು ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಇಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
BREAKING NEWS: ಓಲಾ, ಊಬರ್ಗೆ ಬಿಗ್ ರಿಲೀಫ್; ಸಾರಿಗೆ ಇಲಾಖೆ ಆದೇಶಕ್ಕೆ ಕೋರ್ಟ್ ಮಧ್ಯಂತರ ತಡೆ
ಈ ಪ್ರದೇಶದ ವ್ಯಾಪ್ತಿಗೊಳಪಡುವ ಗ್ರಾಹಕರು ಸಹಕರಿಸುವಂತೆ ಕುಂಸಿ ಮೆಸ್ಕಾಂ ಕಾರ್ಯ ಮತ್ತು ಪಾಲನಾ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.