ಬೆಂಗಳೂರು: ಈಗಾಗಲೇ ಸುರಿಯುತ್ತಿರುವಂತ ಮಳೆಯಿಂದಾಗಿ ( Rain ) ರಾಜ್ಯದ 13 ಜಿಲ್ಲೆಗಳಲ್ಲಿ ನೆರೆ, ಪ್ರವಾಹದ ಭೀತಿಯಿಂದ ಜನರು ಸಂತ್ರಸ್ತರಾಗಿದ್ದಾರೆ. ಈ ಕಾರಣದಿಂದಾಗಿಯೇ ಸೂಕ್ತ ಪರಿಹಾರ ಕಾಮಗಾರಿ ಕೈಗೊಳ್ಳೋದಕ್ಕಾಗಿ ಸಿಎಂ ಬೊಮ್ಮಾಯಿ ಇಂದು 124 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯಾಧ್ಯಂತ ಮತ್ತೆ ಐದು ದಿನ ಭಾರೀ ಮಳೆಯಾಗಲಿದೆ ( Heavy Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ( Weather department forecast ) ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು, ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿಯ ಬೀಸುವಿಕೆಯ ಪರಿಣಾಮದಿಂದಾಗಿ ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಒಳನಾಡು, ಕರಾವಳಿ ಹಾಗೂ ರಾಜ್ಯದ ರಾಜಧಾನಿ ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 5 ದಿನ ಭಾರೀ ಮಳೆಯಾಗಲಿದೆ. ಹೀಗಾಗಿ ಯಲ್ಲೋ ಅಲರ್ಟ್ ( Yellow Alert ) ಘೋಷಿಸಲಾಗಿದೆ.
ಇನ್ನೂ ಉತ್ತರ ಒಳನಾಡಿನಲ್ಲಿಯೂ ವರುಣ ಆರ್ಭಟಿಸಲಿದ್ದಾನೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ.
BREAKING NEWS: ಓಲಾ, ಊಬರ್ಗೆ ಬಿಗ್ ರಿಲೀಫ್; ಸಾರಿಗೆ ಇಲಾಖೆ ಆದೇಶಕ್ಕೆ ಕೋರ್ಟ್ ಮಧ್ಯಂತರ ತಡೆ