ನವದೆಹಲಿ: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಕನ್ನಡ ರಾಜ್ಯೋತ್ಸವದ ಬಿಗ್ ಗಿಫ್ಟ್ ಎನ್ನುವಂತೆ ನವೆಂಬರ್ 10ರಿಂದ ಭಾರತದಲ್ಲಿ ಐದನೇ ವಂದೇ ಭಾರತ್ ಎಕ್ಸ್ ಪ್ರೆಸ್ ( Vande Bharat Express ) ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದಲ್ಲಿ ನವೆಂಬರ್ 10 ರಿಂದ ಸಂಚಾರ ಆರಂಭಿಸುವ ಸಾಧ್ಯತೆ ಇದೆ.
BIGG NEWS : ಬೆಂಗಳೂರಿನಲ್ಲಿ ರಾತ್ರಿ 1 ಗಂಟೆಯವರೆಗೂ ಹೋಟೆಲ್ ತೆರೆಯಲು ಅನುಮತಿ
ಬೆಂಗಳೂರು ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗುತ್ತಿರುವ ನಾಡಪ್ರಭು ಕೆಂಪೇಗೌಡರ ಬೃಹತ್ ಪ್ರತಿಮೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 10ಕ್ಕೆ ಬೆಂಗಳೂರಿಗೆ ಬರುವ ಸಾಧ್ಯತೆ ಇದ್ದು, ಅವರೇ ಈ ಹೊಸ ರೈಲಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
BIGG NEWS : ರಾಜ್ಯಾದ್ಯಂತ `ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್’ ಅಳವಡಿಕೆಗೆ ರಾಜ್ಯ ಸರ್ಕಾರ ಸಿದ್ಧತೆ
ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ( Vande Bharat Express Train ) ಪ್ರಧಾನಿ ನರೇಂದ್ರ ಮೋದಿ ಗುರುವಾರ ಹಸಿರು ನಿಶಾನೆ ತೋರಿಸಿದ್ದರು. ನಂತರ, ಹಿಮಾಚಲ ಪ್ರದೇಶ ಮತ್ತು ಹರಿಯಾಣದ ಎರಡು ರಾಜ್ಯಗಳ ಮುಖ್ಯಮಂತ್ರಿಗಳಾದ ಜೈರಾಮ್ ಠಾಕೂರ್ ಮತ್ತು ಮನೋಹರ್ ಲಾಲ್ ಖಟ್ಟರ್ ಅವರು ಹೈಸ್ಪೀಡ್ ರೈಲಿನಲ್ಲಿ ಪ್ರಯಾಣಿಸಿದ್ದಾರೆ.
ಈ ರೈಲು ದೆಹಲಿ ಮತ್ತು ಚಂಡೀಗಢ ನಡುವಿನ ಪ್ರಯಾಣದ ಸಮಯವನ್ನು ಮುಂದಿನ ವಾರದಿಂದ ಮೂರು ಗಂಟೆಗಳವರೆಗೆ ತರಲು ಸಜ್ಜಾಗಿದೆ. ಉನಾದಿಂದ ನವದೆಹಲಿಗೆ ಪ್ರಯಾಣದ ಸಮಯವನ್ನು ಎರಡು ಗಂಟೆಗಳಷ್ಟು ಕಡಿಮೆ ಮಾಡಲಾಗುವುದು ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.