ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೆ ಹೋಟೆಲ್ ಗಳನ್ನು ತೆರೆದಿರಲು ಅನುಮತಿ ನೀಡಿ, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ. ಹೀಗಾಗಿ ಇನ್ಮುಂದೆ ಬೆಂಗಳೂರಿನಲ್ಲಿ ರಾತ್ರಿ 1 ಗಂಟೆವರೆಗೂ ಹೋಟೆಲ್ ಗಳು ಓಪನ್ ಆಗಿರಲಿದ್ದಾವೆ.
BIG NEWS : ತಮಿಳುನಾಡಿನಲ್ಲಿ 60ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ, ಆಸ್ಪತ್ರೆಗೆ ದಾಖಲು
ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಹೋಟೆಲ್ ಗಳು ರಾತ್ರಿ 1 ಗಂಟೆಯವರೆಗೆ ವ್ಯಾಪಾರ ನಡೆಸಲು ಅನುಮತಿ ಇದ್ದರೂ ಪೊಲೀಸರು ರಾತ್ರಿ 10 ಗಂಟೆಗೆಲ್ಲ ಬಂದ್ ಮಾಡಿಸುತ್ತಿದ್ದಾರೆ. ಈ ಮೂಲಕ ಪೊಲೀಸರು ಕಿರಿಕಿರಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದಿದ್ದಾರೆ.
Rain In Karnataka : ರಾಜ್ಯದಲ್ಲಿ ಇನ್ನೂ 6 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
ಸಾರ್ವಜನಿಕ ಸ್ಥಳಗಳಲ್ಲಿ ತಿಂಡಿ ತನಿಸು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ಬೆಳಿಗ್ಗೆ 6ರಿಂದ ರಾತ್ರಿ 1 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಹೋಟೆಲ್ ಗಳಿಗೆ ತೊಂದರೆ ನೀಡದಂತೆ ನೋಡಿಕೊಳ್ಳುವಂತೆ ಡಿಸಿಪಿಗಳಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶದಲ್ಲಿ ಖಡಕ್ ಸೂಚನೆ ನೀಡಿದ್ದಾರೆ.