ಬಳ್ಳಾರಿ : ಗಡಿ ಜಿಲ್ಲೆಯಲ್ಲಿ ಮುನ್ಸಿಪಲ್ ಮೈದಾನದಲ್ಲಿ ರಾಹುಲ್ ಗಾಂಧಿ ನೇತೃತ್ವದ ಬೃಹತ್ʻಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ಈ ಹಿನ್ನೆಲೆ ನಗರದ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
BIGG NEWS : ಮುರುಘಾಮಠದಲ್ಲಿ ನಾಲ್ಕೂವರೆ ವರ್ಷದ ಮಗು ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ನಗರದ ಮುನ್ಸಿಪಲ್ ಮೈದಾನದಲ್ಲಿ ಇಂದು ಮಧ್ಯಾಹ್ನ 12ಕ್ಕೆ ಬೃಹತ್ ಸಮಾವೇಶ ನಡೆಯಲಿದ್ದು, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಸೇರಿ ಅಕ್ಕಪಕ್ಕದ ಜಿಲ್ಲೆ, ರಾಜ್ಯಗಳಿಂದಲೂ ಸಹಸ್ರಾರು ಜನ ಆಗಮಿಸುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ಜನ ಸ್ಥಳಕ್ಕೆ ಆಗಮಿಸಿದ್ದು, ಇನ್ನೂ ಸಾವಿರಾರು ಮಂದಿ ನಗರ ಪ್ರವೇಶಿಸಿದ್ದಾರೆ.
ಪರಿಣಾಮ ನಗರದಲ್ಲಿ ಟ್ರಾಫಿಕ್ ಜಾಮ್ ಆಗಿ ವಿದ್ಯಾರ್ಥಿಗಳು ಪರದಾಡಬಾರದು ಎಂದು ಮುಂಜಾಗ್ರತಾ ಕ್ರಮವಾಗಿ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಶಾಲೆಗಳಿಗೆ ಅ.17ರ ವರೆಗೆ ದಸರಾ ರಜೆ ಇದೆ.ಕಾಂಗ್ರೆಸ್ ಸಮಾವೇಶಕ್ಕೆ ನಗರದ ಮುನ್ಸಿಪಲ್ ಮೈದಾನದಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿವೆ.
BIGG NEWS : ಮುರುಘಾಮಠದಲ್ಲಿ ನಾಲ್ಕೂವರೆ ವರ್ಷದ ಮಗು ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ವೇದಿಕೆ ಮುಂಭಾಗ ಸುಮಾರು 80 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಮಳೆ ಆತಂಕ ಇರುವುದರಿಂದ ಟಿಮನ್ ಶೀಟ್ನಿಂದ ಮೇಲ್ಛಾವಣಿ ನಿರ್ಮಿಸಲಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ್, ಚತ್ತೀಸಗಡ ಮುಖ್ಯಮಂತ್ರಿ ಬೂಪೇಶ್ ಬಾಬಲೆ, ಎಐಸಿಸಿ ಪ್ರಮುಖರಾದ ಕಮಲ್ ನಾಥ್, ದಿಗ್ವಿಜಯ್ ಸಿಂಗ್, ಮಲ್ಲಿಕಾರ್ಜುನ ರ್ಖಗೆ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಪಕ್ಷದ ಪ್ರಮುಖರು ಪಾಲೊಳ್ಳಲಿದ್ದಾರೆ.
https://kannadanewsnow.com/kannada/bigg-news-big-twist-to-the-case-of-a-four-and-a-half-year-old-boy-being-found-in-murugamath/