ಹುಬ್ಬಳ್ಳಿ : ಹಿಂದೂ ಸಂಘಟನೆಗಳಿಂದ ಹಲಾಲ್ ಮುಕ್ತ ದೀಪಾವಳಿ ಆಚರಣೆ ಮಾಡಲು ಒತ್ತಾಯಿಸಿದ್ದು, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕರೆ (Pramod Muthalik) ನೀಡಿದ್ದಾರೆ.
ಈ ಹಲಾಲ್ ಕಟ್ ದಂಗಲ್ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ಹಿಂದೂ ವ್ಯಾಪಾರಿಗಳಿಂದಲೇ ಹಬ್ಬಕ್ಕೆ ಬೇಕಾದ ಬಟ್ಟೆ, ಪಟಾಕಿ, ಪೂಜಾ ಸಾಮಾಗ್ರಿಗಳನ್ನು ಖರೀದಿಸಿ. ಮುಸ್ಲಿಂ ವ್ಯಾಪಾರಿಗಳ ಬಳಿ ವ್ಯಾಪಾರ ಮಾಡಬೇಡಿ. ಹಲಾಲ್ ಮಾಂಸ, ಉತ್ಪನ್ನಗಳ ಖರೀದಿಯಿಂದ ದೂರವಿರಿ. ಹಲಾಲ್ ಉತ್ಪನ್ನಗಳ ಮಾರಾಟದಿಂದ ಬಂದ ಹಣ ದೇಶದ ಭಯೋತ್ಪಾದನಾ ಚಟುವಟಿಕೆಗೆ ಬಳಕೆಯಾಗುತ್ತಿದೆ. ಹೀಗಾಗಿ ಮುಸ್ಲಿಮರ ಬಳಿ ವ್ಯಾಪಾರ ಮಾಡದಂತೆ ಪ್ರಮೋದ್ ಮುತಾಲಿಕ್ ಮನವಿ ಮಾಡಿದ್ದಾರೆ.
ದೇಶದ ಕಾನೂನು ಗೌರವಿಸದವರ ಬಳಿ ವ್ಯಾಪಾರ ಯಾಕೆ ಮಾಡಬೇಕು ? ಹಿಂದೂಗಳ ಹಬ್ಬ, ಭಾವನೆಗಳನ್ನು ವಿರೋಧಿಸುವವರ ಬಳಿ ನಾವ್ಯಾಕೆ ಖರೀದಿ ಮಾಡಬೇಕು ? ಮುಸ್ಲಿಂ ವ್ಯಾಪಾರಿಗಳಿಗೆ ತಕ್ಕ ಪಾಠ ಕಲಿಸುವ ಸಮಯ ಬಂದಿದೆ. ಹಂತ ಹಂತವಾಗಿ ನಮ್ಮ ಅಭಿಯಾನ ಯಶಸ್ವಿಯಾಗಲಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.