ನವದೆಹಲಿ : ಕೇಂದ್ರ ಸರ್ಕಾರವು ವೈದ್ಯಕೀಯ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ದೇಶದಲ್ಲಿ ಹಿಂದಿ ಸೇರಿದಂತೆ ಇತರೆ ಪ್ರಾದೇಶಿಕ ಭಾಷೆಗಳಲ್ಲಿ ಎಂಬಿಬಿಎಸ್ ಕಲಿಕೆಯನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಹೌದು, ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದಿಯಲ್ಲೂ ಎಂಬಿಬಿಎಸ್ ಕಲಿಕೆಯನ್ನು ಇಂದಿನಿಂದ ಆರಂಭಿಸಲಾಗುತ್ತಿದೆ. ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಪ್ರದೇಶದಲ್ಲಿ ಹಿಂದಿ ಭಾಷಾ ಎಂಬಿಬಿಎಸ್ ಗೆ ಹಿಂದಿ ಭಾಷೆಯಲ್ಲಿ ವೈದ್ಯಕೀಯ ಪಠ್ಯ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.
ಇನ್ನು ಶೀಘ್ರವೇ ತಮಿಳು ಸೇರಿ ಇತರೆ ಪ್ರಾದೇಶಿಕ ಭಾಷೆಗಳಿಗೂ ಎಂಬಿಬಿಎಸ್ ವಿಸ್ತರಿಸಲು ಕೇಂದ್ರ ಸರ್ಕಾರ ಸಿದ್ಧತೆನಡೆಸಿದ್ದು, ವೈದ್ಯಕೀಯ ಪದಗಳಿಗೆ ತಮಿಳು ರೂಪ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಶೀಘ್ರವೇ ತಮಿಳು ಸೇರಿದಂತೆ ಇತರ ಪ್ರಾದೇಶಿಕ ಭಾಷೆಗಳಲ್ಲೂ ಎಂಬಿಬಿಎಸ್ ಕಲಿಕೆ ಆರಂಭವಾಗಲಿದೆ.