ಚಿತ್ರದುರ್ಗ: ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ಪೋಕ್ಸೋ ಕೇಸ್ ನಲ್ಲಿ ( POSCO Case ) ಜೈಲು ಸೇರಿರುವ ಕಾರಣದಿಂದಾಗಿ, ಇದೀಗ ಮುರುಘಾ ಮಠದ ಪೂಜಾ ಕೈಂಕರ್ಯಕ್ಕಾಗಿ ದಾವಣಗೆರೆಯ ವಿರಕ್ತ ಮಠದ ಬಸವಪ್ರಭು ಶ್ರೀಗಳನ್ನು ನೇಮಕ ಮಾಡಲಾಗಿದೆ.
ಮುರುಘಾ ಶ್ರೀಗಳ ( Murugha Sri ) ವಿರುದುದ್ಧ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನಲೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಎರಡು ದಿನಗಳ ಹಿಂದೆ ಮತ್ತಿಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಕೂಡ ಮುರುಘಾ ಶ್ರೀ ವಿರುದ್ಧ ದಾಖಲಾಗಿತ್ತು.
ರಾಜ್ಯದ ಮೀನುಗಾರರಿಗೆ ಸಿಎಂ ಬೊಮ್ಮಾಯಿ ದೀಪಾವಳಿ ಗಿಫ್ಟ್: ಸಹಾಯಧನ ಯೋಜನೆ 300 ಮೀನುಗಾರರಿಂದ 1000ಕ್ಕೆ ಹೆಚ್ಚಳ
ಈ ಹಿನ್ನಲೆಯಲ್ಲಿ ನಿನ್ನೆಷ್ಠೇ ಆಡಳಿತಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಸ್ಐಎಂ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಹಾಗೂ ನಿವೃತ್ತ ನ್ಯಾಯಮೂರ್ತಿ ಎಸ್ ಬಿ ವಸ್ತ್ರದಮಠ್ ಅವರಿಗೆ ಮುರುಘಾ ಶ್ರೀ ಪವರ್ ಆಫ್ ಅಟಾರ್ನಿಯನ್ನು ಹಸ್ತಾಂತರಿಸಿದ್ದರು.
ಈ ನಡುವೆ ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷರ ಸಂಬಂಧ ಹಲವು ಮುಖಂಡರು ದಾವಣಗೆರೆಯ ವಿರಕ್ತ ಮಠದ ಬಸವಪ್ರಭು ಶ್ರೀ ಹೆಸರನ್ನು ಅಂತಿಮಗೊಳಿಸಿದ್ದಾರೆ. ಮುರುಘಾ ಮಠಕ್ಕೆ ಪ್ರಭಾರ ಪೀಠಾಧ್ಯಕ್ಷರನ್ನಾಗಿ ನೇಮಕ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಹೈಕೋರ್ಟ್ ಅನುಮತಿ ಪಡೆದು ಮುರುಘಾ ಮಠದ ಪೂಜಾ ಕೈಂಕರ್ಯಕ್ಕಾಗಿ ಬಸವಪ್ರಭು ಶ್ರೀಗಳನ್ನು ನೇಮಕ ಮಾಡಲಾಗಿದೆ.
‘ಚರ್ಮ ಗಂಟು ರೋಗ’ದ ಬಗ್ಗೆ ರೈತರಿಗೊಂಡು ಮಹತ್ವದ ಮಾಹಿತಿ: ಈ ‘ಮನೆಮದ್ದು ಚಿಕಿತ್ಸೆ’ ಮಾಡಿ | Lumpy Skin Disease