ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ಅಕ್ಟೋಬರ್ 17, 2022ರ ನಾಳೆ ಚುನಾವಣೆ ( Congress President Election 2022 ) ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದಂತ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಕಣದಲ್ಲಿದ್ದಾರೆ. ಇಬ್ಬರ ನಡುವೆ ತೀವ್ರ ಪೈಪೋಟಿ ಉಂಟಗಾಲಿದೆ ಎನ್ನಲಾಗಿದೆ.
ಬಿಜೆಪಿ ಎಂದರೆ ಕಳ್ಳ, ಮಳ್ಳ, ಸುಳ್ಳರ ಪಕ್ಷ ಎನ್ನಲು ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? – ಕಾಂಗ್ರೆಸ್ ಪ್ರಶ್ನೆ
ನಾಳೆ ನಡೆಯಲಿರುವಂತ ಎಐಸಿಸಿ ಅಧ್ಯಕ್ಷರ ಆಯ್ಕೆಯ ಚುನಾವಣೆಗಾಗಿ ದೇಶಾದ್ಯಂತ 9,100 ಮಂದಿ ತಮ್ಮ ಮತವನ್ನು ಚಲಾಯಿಸಲಿದ್ದಾರೆ. ಈ ಮತದಾರರಲ್ಲಿ ಕರ್ನಾಟಕದಿಂದ 494 ಮಂದಿ ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಇವರಲ್ಲಿ 479 ಪಿಸಿಸಿ ಪ್ರತಿನಿಧಿಗಳು, 15 ಶಾಸಕಾಂಗ ಪಕ್ಷದ ಸದಸ್ಯರು ಸೇರಿದ್ದಾರೆ.
ಎಐಸಿಸಿ ಅಧ್ಯಕ್ಷರ ಚುನಾವಣೆಗಾಗಿ ಈಗಾಗಲೇ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವಂತ ಕೆಪಿಸಿಸಿ ಕಚೇರಿಯಲ್ಲಿ ಸಿದ್ಧತೆ ಪೂರ್ಣಗೊಂಡಿದೆ ಎನ್ನಲಾಗಿದೆ. ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.