ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಕರ್ನಾಟಕ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮತ್ತೊಬ್ಬ ಸಂಸದ ಶಶಿ ತರೂರು ವಿರುದ್ದ ನೇರ ಹಣಾಹಣಿ ಏರ್ಪಟ್ಟಿದೆ.
ನಾಳೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಹಿನ್ನೆಲೆ ಭಾರತ್ ಜೋಡೋ ಯಾತ್ರೆಗೆ ನಾಳೆ ಬ್ರೇಕ್ ಬೀಳಲಿದೆ. ಹೌದು, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಚುನಾವಣೆ ಹಿನ್ನೆಲೆ ( ಅ.17) ರಂದು ಭಾರತ್ ಜೋಡೋ ಯಾತ್ರೆಗೆ ಬಿಡುವು ನೀಡಲಾಗಿದೆ. ಬಳ್ಳಾರಿ ತಾಲೂಕಿನ ಸಿಂಧವಾಳ್ ಕ್ರಾಸ್ ಬಳಿ ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆ ಇಂದಿಗೆ ಮುಕ್ತಾಯಗೊಂಡಿದೆ. ನಂತರ ಆಂಧ್ರ ಪ್ರದೇಶದ ಮೂಲಕ ರಾಯಚೂರಿಗೆ ರಾಹುಲ್ ಯಾತ್ರೆ ತೆರಳಲಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸ್ಪರ್ಧೆಯಿಂದ ಹಿಂದೆ ಸರಿದ ಕಾರಣ ಈ ಇಬ್ಬರು ನಾಯಕರ ನಡುವೆ ತೀವ್ರ ಪೈಪೋಟಿ ಕಂಡು ಬಂದಿದೆ.ಸರಿಸುಮಾರು 9,೦೦೦ಕ್ಕೂ ಅಧಿಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳು ಮತ ಚಲಾವಣೆ ಮಾಡುವ ಅರ್ಹತೆ ಪಡೆದುಕೊಂಡಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಮತದಾನ ನಡೆಯಲಿದೆ. ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರು ಅವರು ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಮನ ಗೆಲ್ಲುವ ಕಸರತ್ತು ನಡೆಸಿದ್ದಾರೆ.
BREAKING NEWS : ಆಟಗಾರರಿಗೆ ‘ಕೊರೊನಾ ಪಾಸಿಟಿವ್’ ಬಂದ್ರೂ ಡೋಂಟ್ ಕೇರ್, ‘ಟಿ20 ವಿಶ್ವಕಪ್’ ಆಡಲು ಅವಕಾಶ