ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಿದ್ದಾರೆ.
ಇಂದು ಸುಮಾರು 10 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ₹ 16,000 ಕೋಟಿ ರೂ.ಗಳನ್ನು ಜಮಾ ಮಾಡಲಾಗವುದು . ಈ ಬಗ್ಗೆ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ದೆಹಲಿಯಲ್ಲಿ ಇಂದು ನಡೆಯುವ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ “ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022” ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಂತು ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ.
हमारी सरकार अन्नदाताओं के जीवन को आसान बनाने के लिए प्रतिबद्ध है। इसी कड़ी में कल सुबह 11:30 बजे दिल्ली में किसान सम्मान सम्मेलन का उद्घाटन करने के साथ ही पीएम-किसान की 12वीं किस्त भी जारी करूंगा। इस अवसर पर कई और योजनाओं को शुरू करने का भी सौभाग्य मिलेगा।https://t.co/qrkME13nSa
— Narendra Modi (@narendramodi) October 16, 2022
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಮೋದಿಯವರು 2019 ರಲ್ಲಿ ಪ್ರಾರಂಭಿಸಿದರು. ಕೆಲವು ವಿನಾಯಿತಿಗಳಿಗೆ ಒಳಪಟ್ಟು ಕೃಷಿಯೋಗ್ಯ ಭೂಮಿಯೊಂದಿಗೆ ದೇಶಾದ್ಯಂತ ಎಲ್ಲಾ ಭೂಮಾಲೀಕ ರೈತ ಕುಟುಂಬಗಳಿಗೆ ಆದಾಯ ಬೆಂಬಲವನ್ನು ಒದಗಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.
BIGG NEWS : ರಾಜ್ಯದ ಜನತೆಗೆ ಬಿಗ್ ಶಾಕ್ : `ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್’ ಅಳವಡಿಕೆಗೆ ರಾಜ್ಯ ಸರ್ಕಾರ ಸಿದ್ಧತೆ
SHOCKING NEWS: ಆಂಧ್ರ ಪ್ರದೇಶದಲ್ಲಿ 18 ನಾಯಿಗಳ ಮಾರಣ ಹೋಮ: ಗ್ರಾಮದ ಮುಖ್ಯಸ್ಥರ ಆದೇಶ ಪಾಲಿಸಿದ್ದೇನೆ ಎಂದ ಕಿಲ್ಲರ್