ಬೆಳಗಾವಿ : ಸಚಿವ ಸ್ಥಾನದ ಆಕ್ಷಾಂಕ್ಷಿಗಳಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಿಹಿಸುದ್ದಿ ನೀಡಿದ್ದು, ಆದಷ್ಟು ಬೇಗ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಿದ್ದಾರೆ.
BIG BREAKING NEWS: ಕೆರೆ ಕಟ್ಟೆಗಳ ನಿರ್ಮಾಣದ ಸರದಾರ ಎಂದೇ ಖ್ಯಾತರಾಗಿದ್ದ `ಕಲ್ಮನೆ ಕಾಮೇಗೌಡʼ ಇನ್ನಿಲ್ಲ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸಹ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೇಳಿದ್ದಾರೆ. ಹೀಗಾಗಿ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದರು.
ಅರುಣ್ ಸಿಂಗ್ ಅವರು ನಿನ್ನೆ ರಾತ್ರಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ನಮ್ಮ ಸ್ನೇಹಿತರಿದ್ದಾರೆ. ಸಾಮಾನ್ಯವಾಗಿ ಎಲ್ಲರೊಂದಿಗೆ ನಮ್ಮ ಚರ್ಚೆ ಆಗುತ್ತದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು, ಕಾಂಗ್ರೆಸ್ ಸೋಲಿಸಲು ರಮೇಶ್ ಜಾರಕಿಹೊಳಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ನಾಯಕರ ವಿರುದ್ಧವೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ರನ್ನು ಮಂತ್ರಿ ಮಾಡಿಲ್ಲ ಎಂದು ಹೀಗೆ ಮಾಡುತ್ತಿದ್ದಾರೆ. ಯಾರೇ ಆದರೂ ಪಕ್ಷದ ಚೌಕಟ್ಟಿನಲ್ಲಿಯೇ ಮಾತನಾಡಬೇಕು. ಪಕ್ಷದ ಹಿರಿಯ ನಾಯಕರನ್ನು ಗೌರವಿಸಬೇಕು. ಯತ್ನಾಳ್ ರ ಇಂಥ ಹೇಳಿಕೆಗೆ ನೋಟಿಸ್ ಜಾರಿ ಮಾಡಿದ್ದೇವೆ ಎಂದರು.