ಬೆಂಗಳೂರು : ಇಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿತರೂರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಕರ್ನಾಟಕದಲ್ಲಿ ಸೋಮವಾರ ನಡೆಯಲಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ 538 ಪ್ರತಿನಿಧಿಗಳು ಮತ ಚಲಾಯಿಸಲಿದ್ದಾರೆ. ಈ ಪೈಕಿ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ 40 ಪ್ರತಿನಿಧಿಗಳು ಬಳ್ಳಾರಿಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.
BIG BREAKING NEWS: ಕೆರೆ ಕಟ್ಟೆಗಳ ನಿರ್ಮಾಣದ ಸರದಾರ ಎಂದೇ ಖ್ಯಾತರಾಗಿದ್ದ `ಕಲ್ಮನೆ ಕಾಮೇಗೌಡʼ ಇನ್ನಿಲ್ಲ
ಬಳ್ಳಾರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್, ಬಳ್ಳಾರಿ ಶಾಸಕ ಬಿ.ನಾಗೇಂದ್ರ, ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸೇರಿದಂತೆ ರಾಜ್ಯದ ಐವರು ಪ್ರತಿನಿಧಿಗಳು ಬಳ್ಳಾರಿಯಲ್ಲಿ ಮತ ಚಲಾಯಿಸಲಿದ್ದಾರೆ. ರಾಜ್ಯದ ಒಟ್ಟು 498 ಪ್ರತಿನಿಧಿಗಳು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ರಾಜ್ಯದ ಅತ್ಯಂತ ಹಿರಿಯ ಮತದಾರರಾಗಿದ್ದರೆ, ಪಕ್ಷದ ವಕ್ತಾರೆ ಐಶ್ವರ್ಯಾ ಮಹದೇವ್ ಅವರು ರಾಜ್ಯದ ಅತ್ಯಂತ ಕಿರಿಯ ಮತದಾರರಾಗಿದ್ದಾರೆ.