ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದ ರಾಜ್ಯಾದ್ಯಂತ 2-3 ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
. ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡ್ಮೂರು ದಿನ ಮಳೆಯಾಗಲಿದ್ದು, ಹಂತ ಹಂತವಾಗಿ ಚಳಿ ಪ್ರಮಾಣ ಸಹ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮುಂದಿನ 2-3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೇಶದ ಒಟ್ಟು 15 ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಪ್ಪಳ ಹಾಗೂ ರಾಮನಗರದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.
ಇದರ ನಡುವೆ ಕೊಮೊರಿನ್ ಪ್ರದೇಶದ ಬಳಿ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಎರಡು ಸಕ್ರಿಯ ಚಂಡಮಾರುತದ ಪರಿಚಲನೆಗಳ ದೃಷ್ಟಿಯಿಂದ ದಕ್ಷಿಣ ಪರ್ಯಾಯದ್ವೀಪದ ಭಾರತದ ಮೇಲೆ ವರ್ಧಿತ ಮಳೆಯ ಚಟುವಟಿಕೆಯು ಶುಕ್ರವಾರದಿಂದ ಪ್ರಾರಂಭವಾಗುತ್ತದೆ ಎನ್ನಲಾಗಿದೆ.