ಚಿಕ್ಕಬಳ್ಳಾಪುರ: ಅಕ್ಟೋಬರ್ 25ರ ಮಂಗಳವಾರ ಸಂಭವಿಸುವ ಕೇತು ಗ್ರಸ್ತ ಸೂರ್ಯಗ್ರಹಣ ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿಸುಬ್ರಮಣ್ಯಸ್ವಾಮಿ ದೇವಾಲಯವನ್ನು ಬಂದ್ ಮಾಡಲಾಗಿದೆ.
‘ಭಾರತ್ ಜೋಡೋ ಯಾತ್ರೆ’ ಹೃದಯ ಬೆಸೆಯುವ ಯಾತ್ರೆ : ದಿನೇಶ್ ಗುಂಡೂರಾವ್ ಟ್ವೀಟ್ |Dinesh Gundu Rao
ಈ ಕುರಿತಂತೆ ದೇವಾಲಯ ಕಾರ್ಯ ನಿರ್ವಾಹಕಾಧಿಕಾರಿ ಪ್ರಕಟಣೆ ನೀಡಿದ್ದು, ಅಕ್ಟೋಬರ್ 25ರ ಮಂಗಳವಾರ ಸಂಭವಿಸುವ ಕೇತು ಗ್ರಸ್ತ ಸೂರ್ಯಗ್ರಹಣ ಹಿನ್ನಲೆ ಶ್ರೀ ಘಾಟಿಸುಬ್ರಮಣ್ಯಸ್ವಾಮಿ ದರ್ಶನಕ್ಕೆ ಬೆಳಗ್ಗೆ 10:30 ರವರೆಗೆ ಮಾತ್ರ ಅವಕಾಶ ನೀಡಲಾಗಿದ್ದು, ತದನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ.
ಗ್ರಹಣದ ನಂತರ ರಾತ್ರಿ 7.45ಕ್ಕೆ ದೇವರ ದರ್ಶನಕ್ಕೆ ಅವಕಾಶ ಇರುತ್ತದೆ. ಅಂದು ಬೆಳಗ್ಗೆ 6:30ಕ್ಕೆ ಅಭಿಷೇಕ ಪ್ರಾರಂಭವಾಗುತ್ತದೆ ಹಾಗೂ ಮಹಾಮಂಗಳಾರತಿಯನ್ನು ಬೆಳಗ್ಗೆ 08:00 ಕ್ಕೆ ನೆರವೇರಿಸಲಾಗುತ್ತದೆ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.