ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಬಂಡವಾಳ ಹೂಡಿಕೆ ಸಲಹೆಗಾರರನ್ನಾಗಿ ಕೇದಾರನಾಥ ಮುದ್ದಾ ಅವರನ್ನು ನೇಮಕ ಮಾಡಲಾಗಿದೆ.
BIG BREAKING NEWS: ಎಐಸಿಸಿ ಅಧ್ಯಕ್ಷರ ಆಯ್ಕೆ ಚುನಾವಣೆ ಮತದಾನ ಅಂತ್ಯ | Congress President Poll 2022
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಈ ತಕ್ಷಣದಿಂದ ಜಾರಿಗೆ ಬರುವಂತೆ ಕೇದಾರನಾಥ್ ಮುದ್ದಾ ಅವರನ್ನು ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಬಂಡವಾಳ ಹೂಡಿಕೆ ಸಲಹೆಗಾರರನ್ನಾಗಿ ಗುತ್ತಿಗೆ ಆಧಾರದ ಮೇಲೆ ನೇಮಿಸಿ ಆದೇಶಿಸಿದ್ದಾರೆ.