ಬೆಂಗಳೂರು: ರಾಜ್ಯದ 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದ್ದು, ಲಂಬಾಣಿ ತಾಂಡಾಗಳನ್ನೂ ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು ರಾಜ್ಯದ 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಗುರುತಿಸಲಾಗಿದೆ. ಲಂಬಾಣಿ ತಾಂಡಾಗಳನ್ನೂ ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ ಎಂದು ವಿಧಾನಸೌಧದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ಜಿಲ್ಲೆಗಳಲ್ಲಿನ ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗತಿ ಬಗ್ಗೆ ಸಭೆಯಲ್ಲಿ ಗಂಭೀರವಾಗಿ ಚರ್ಚೆಯಾಗಿದೆ. ಐಎಂಆರ್, ಎಂ.ಎಂ.ಆರ್ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತವಾಗಿದೆ. ಜಮೀನು ವಿಚಾರದಲ್ಲಿ ಬಗರ್ ಹುಕುಂ ಸಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ, ಬರ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ಅಭಿವೃದ್ಧಿ ಆಗಿರುವ ರಸ್ತೆಗಳು ಹಾಳಾಗಿದ್ದರೆ ಕನಿಷ್ಠ ಓಡಾಡಲು ಜಾಗ ಮಾಡಿಕೊಡಬೇಕು. ಹಳ್ಳಿಗಳಲ್ಲಿ ಸ್ಮಶಾನ ಇಲ್ಲದಿದ್ದರೇ ಸರ್ಕಾರದ ಅಥವಾ ಖಾಸಗಿ ಜಾಗ ಗುರುತಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು. ಮಣ್ಣು ಸವಕಳಿಯಿಂದ ಹಾನಿಗೊಳಗಾದವರಿಗೂ ಪರಿಹಾರ ನೀಡಬೇಕು. ಪಿಎಂ ಸ್ವನಿಧಿ ಅಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿರುವವರಿಗೆ ಹಣ ಮಂಜೂರು ಮಾಡಲು ಸೂಚನೆ ನೀಡಲಾಗಿದೆ.. ತಾಲ್ಲೂಕು ಮಟ್ಟದ ಪ್ರಕರಣಗಳನ್ನು ಸ್ಥಳದಲ್ಲೇ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.