ಬಳ್ಳಾರಿ : ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್ಶಿಫ್ ಯೋಜನೆಯಡಿ 2022-23ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅ.31 ಆಗಿದೆ.
ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದ ನಂತರ ಅರ್ಜಿಯ ಒಂದು ಪ್ರತಿಯನ್ನು ತಮ್ಮ ವ್ಯಾಪ್ತಿಗೊಳಪಡುವ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ, ತಾಲೂಕು ಪಂಚಾಯಿತಿ ಕಚೇರಿಗೆ ಇವರಿಗೆ ಒಂದು ಪ್ರತಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ 08 ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದ್ದೊದ್ದೇಶ ಪುನರ್ವಸತಿ ಕಾರ್ಯಕರ್ತರ ದೂರವಾಣಿ ಸಂಖ್ಯೆ ಬಳ್ಳಾರಿ-8880875620, ಸಿರುಗುಪ್ಪ-9743509698, ಸಂಡೂರು-9632052270, ಕೂಡ್ಲಿಗಿ-9731747832, ಹೊಸಪೇಟೆ-9945252991, ಹಡಗಲಿ-9900890403, ಹಗರಿಬೊಮ್ಮನಹಳ್ಳಿ-9741185924, ಹರಪನಹಳ್ಳಿ-9110246455ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-267886ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.