ಬೆಂಗಳೂರು: ನಿನ್ನೆ ರಾಜಾಜಿನಗರ ಸುಜಾತ ಚಿತ್ರಮಂದಿರದ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತದಿಂದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
BIG BREAKING NEWS: ಕೆಪಿಟಿಸಿಎಲ್ ನೇಮಕಾತಿ ಹಗರಣ; 20 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು| KPTCL SCAM
ಘಟನೆ ಕುರಿತು ಸಮಗ್ರ ವರದಿ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅಪಘಾತ ಕುರಿತು ವರದಿ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪ್ರಾಥಮಿಕ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ. ಬೀದರ್ನಿಂದ ಬಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.ರಸ್ತೆ ಗುಂಡಿಗೆ ಮಹಿಳೆ ಬಲಿ ಪ್ರಕರಣ ವಿಷಾಧನೀಯ. ಈಗಾಗಲೇ ಅಲ್ಲಿ ಏನೇನಾಗಿದೆ ಎಂಬುದರ ಬಗ್ಗೆ ಮಾಹಿತಿ ಕೇಳಿದ್ದೇನೆ. ಎಲ್ಲವನ್ನೂ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸ್ಪಷ್ಟನೆ ನೀಡಿದರು.