ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದ ಅಪಾರ್ಟ್ಮೆಂಟ್ ಕಟ್ಟಡವೊಂದರಲ್ಲಿ ಬೀದಿನಾಯಿಯೊಂದು ಒಂದು ವರ್ಷದ ಮಗುವಿನ ಮೇಲೆ ದಾಳಿ ನಡೆಸಿದ್ದು, ಇದೀಗ ಮಗು ಸಾವನ್ನಪ್ಪಿದೆ.
ಸೋಮವಾರ ಸಂಜೆ 4.30ರ ಸುಮಾರಿಗೆ ನೋಯ್ಡಾದ ಸೆಕ್ಟರ್ 100ರಲ್ಲಿರುವ ಲೋಟಸ್ ಬೌಲೆವಾರ್ಡ್ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ. ನಾಯಿ ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಇಂದು ಬೆಳಗ್ಗೆ ಸಾವನ್ನಪ್ಪಿದೆ.
ग्रेटर नोएडा के सेक्टर 100 में एक सोसाइटी में कुत्ते के काटने से 8 महीने के बच्चे की मौत pic.twitter.com/6F2pbU03U0
— Tushar Srivastava (@TusharSrilive) October 18, 2022
ಮಗುವಿನ ಪೋಷಕರು ಕಟ್ಟಡ ಕಾರ್ಮಿಕರಾಗಿದ್ದು, ಇಬ್ಬರೂ ಕೆಲಸ ಮಾಡುತ್ತಿದ್ದರು. ಮಗು ಕೂಡ ಅವರ ಬಳಿಯೇ ಆಟವಾಡುತ್ತಿತ್ತು. ಈ ವೇಳೆ ಮಗು ಮೇಲೆ ನಾಯಿ ಹಠಾತ್ ದಾಳಿ ನಡೆಸಿದೆ. ಘಟನೆ ಸಂಬಂಧ ದೂರು ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡಿರುವ ನೋಯ್ಡಾ ಹೌಸಿಂಗ್ ಸೊಸೈಟಿ ನಿವಾಸಿಗಳು ಒಂದೆಡೆ ಸೇರಿ ನೋಯ್ಡಾ ಪ್ರಾಧಿಕಾರ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಇಲ್ಲಿ ನಡೆಯುತ್ತಲೇ ಇರುತ್ತವೆ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Dogs tear out intestines of child in Lotus Boulevard society noida sector 100, 18-month-old dies#streetdogs #Noida #noidakhabar pic.twitter.com/uwd0zP7NgK
— rajni singh (@imrajni_singh) October 18, 2022
BIGG NEWS : ರಾಜ್ಯದಲ್ಲಿ ನವಜಾತ ಶಿಶು, ತಾಯಿಯಂದಿರ ಮರಣ ಪ್ರಮಾಣ ಇಳಿಕೆ ಮಾಡಲು ಅಗತ್ಯ ಕ್ರಮ : ಸಚಿವ ಮಾಧುಸ್ವಾಮಿ