ದಕ್ಷಿಣ ಕ್ನನಡ: ಜಿಲ್ಲೆಯ ಮಂಗಳೂರಿನ ಸುರತ್ಕಲ್ ಟೋಲ್ ತೆರವು ಆಗ್ರಹಿಸಿ ಟೋಲ್ ವಿರೋಧಿ ಸಮಿತಿ ವತಿಯಿಂದ ಪ್ರತಿಭಟನೆಯ ಭಾರೀ ಹೈಡ್ರಾಮಾ ಸೃಷ್ಟಿಯಾಗುತ್ತಿದೆ. ಒಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಟೋಲ್ ಪ್ಲಾಜಾಗೆ ನುಗ್ಗಿದ್ದರು. ಇನ್ನೊಂದೆಡೆ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಟೋಲ್ ಪ್ಲಾಜಾ ಮೇಲೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಮಣಿಕರ್ಣಿಕಾ ಫಿಲಂ ಫೆಸ್ಟಿವಲ್ನಲ್ಲಿ ಬನಾರಸ್ ಜೋಡಿಗೆ ಸನ್ಮಾನ, ಫಿಲಂ ಫೆಸ್ಟಿವಲ್ನಲ್ಲಿ ಬನಾರಸ್ ಜೋಡಿ ಮಾಡಿದ ಮೋಡಿ…
ಅಲ್ಲದೆ ಕಾರ್ಯಕರ್ತರು ಟೋಲ್ ಸಂಗ್ರಹ ವಸ್ತುಗಳನ್ನು ಪುಡಿಮಾಡಲು ಮುಂದಾದರು.ಕಾರ್ಯಕರ್ತರು ಮತ್ತು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಇದೇ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆಸಲಾಯಿತು. ಬ್ಯಾರಿಕೇಡ್ ಕಿತ್ತೆಸೆದು, ಟೋಲ್ಗೆ ಮುತ್ತಿಗೆ ಹಾಕಿದ 500ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಐವಾನ್ ಡಿಸೋಜ, ಮೊಯಿದ್ದೀನ್ಬಾವ, ಜೆ.ಆರ್ ಲೋಬೋ, ಮಿಥುನ್ ರೈ ಸೇರಿ ಹಲವರ ಬಂಧಿಸಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಟೋಲ್ ಸುತ್ತ ಭಾರೀ ಪೊಲೀಸ್ ಭದ್ರತೆ ಕೈಗೊಳಲಾಗಿದ್ದು, 6 ಕೆಎಸ್ಆರ್ ಪಿ, 5 ಸಿಎಆರ್, 250 ಸಿವಿಲ್, 4 ಎಸಿಪಿ, 15 ಇನ್ಸ್ ಪೆಕ್ಟರ್ ಸೇರಿದಂತೆ 500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.
ಮಣಿಕರ್ಣಿಕಾ ಫಿಲಂ ಫೆಸ್ಟಿವಲ್ನಲ್ಲಿ ಬನಾರಸ್ ಜೋಡಿಗೆ ಸನ್ಮಾನ, ಫಿಲಂ ಫೆಸ್ಟಿವಲ್ನಲ್ಲಿ ಬನಾರಸ್ ಜೋಡಿ ಮಾಡಿದ ಮೋಡಿ…