ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಆಸ್ಟ್ರೇಲಿಯಾ ವಿರುದ್ಧದ ಎರಡನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 19 ರನ್ ಗಳಿಸಿ
ಔಟಾದರು. ಆದರೆ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಬ್ರಿಸ್ಬೇನ್ ನ ಗಬ್ಬಾದಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಆರು ರನ್ ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಭಾರತ ಉತ್ತಮವಾಗಿ ಬೌಲಿಂಗ್ ಮಾಡಿದ್ದಲ್ಲದೆ, ಅತ್ಯುತ್ತಮ ಫೀಲ್ಡಿಂಗ್ ಮೂಲಕ ಅನೇಕ ಆಟಗಾರರನ್ನು ಪೆವಿಲಿಯನ್ ಗೆ ಕಳುಹಿಸಿತು. ವಿಶೇಷವಾಗಿ ವಿರಾಟ್ ಕೊಹ್ಲಿ ಅವರ ಫೀಲ್ಡಿಂಗ್ ನೋಡಲು ಚೆನ್ನಾಗಿತ್ತು. ತನ್ನ 33ನೇ ವಯಸ್ಸಿನಲ್ಲಿಯೂ ಕೊಹ್ಲಿ ಮೈದಾನದಲ್ಲಿ ಚುರುಕುತನವನ್ನು ತೋರಿಸಿದರು.ಕೊಹ್ಲಿಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
Great catch by kohli👍👍 pic.twitter.com/XTOMJPMBbF
— N R (@sports4game) October 17, 2022