ಬೆಂಗಳೂರು : ಯಲಹಂಕ ಏರ್ಪೋರ್ಟ್ ಪ್ಲೈಓವರ್ ಮೇಲೆ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಹಾಗೂ ಯುವತಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 18 ವರ್ಷದ ಯುವತಿ ಮೃತಪಟ್ಟಿದ್ದಾರೆ.
ಗಂಭೀರ ಗಾಯಗೊಂಡ ಯುವಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೇಗವಾಗಿ ಬಂದು ಡಿವೈಡರ್ಗೆ ಬೈಕ್ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಯಲಹಂಕ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
BIGG NEWS ; 2017ರ ದಾಖಲೆ ಹಿಂದಿಕ್ಕಿ ಇತಿಹಾಸದಲ್ಲೇ ‘ಅತಿ ಹೆಚ್ಚು ತೇವಾಂಶ’ ದಾಖಲಿಸಿದ ‘ಬೆಂಗಳೂರು’
BIGG NEWS: ಕಲಬುರಗಿಯಲ್ಲಿ ಕುಡುಕನ ಕಾಟ; ಸಿಕ್ಕಸಿಕ್ಕ ವಾಹನಗಳ ಮೇಲೆ ಕಲ್ಲು ತೂರಿ ಪರಾರಿ