ಬೆಂಗಳೂರು: ಪರೇಶ್ ಮೇಸ್ತ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪರೇಶ್ ಮೇಸ್ತ ಗಲಭೆ ವೇಳೆ ಓಡುತ್ತಿದ್ದಾಗ ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು, ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸಿಬಿಐ ತನಿಖಾ ವರದಿಯಲ್ಲಿ ಬಹಿರಂಗಗೊಂಡಿದೆ.
ಸಿಬಿಐ ಅಧಿಕಾರಿಗಳು ಇಂದು ಹೊನ್ನಾವರದ ನ್ಯಾಯಾಲಯಕ್ಕೆ ಪ್ರಕರಣದ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಮೇಸ್ತನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಆರೋಪಿಗಳನ್ನು ದೋಷ ಮುಕ್ತಗೊಳಿಸಬಹುದು ತಿಳಿಸಿದೆ.
ಕಳೆದ ಐದು ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪರೇಶ್ ಮೇಸ್ತಾ ಸಾವಿಗೆ ಸಂಬಂಧಪಟ್ಟಂತೆ ಆಗ ಕರಾವಳಿ ಭಾಗದಲ್ಲಿ ದೊಡ್ಡ ಬಿರುಗಾಳಿಯನ್ನು ಹಬ್ಬಿಸಿತ್ತು, ಇದಲ್ಲದೇ ಕೆಲ ರಾಜಕೀಯ ಪಾರ್ಟಿಗಳು ಇದನ್ನೇ ಬಂಡವಾಳ ಮಾಡಿಕೊಂಡು ಕೋಮು ಸೌಹರ್ದತೆಗೆ ದಕ್ಕೆ ತಂದಿದ್ದವು ಕೂಡ, ಇವೆಲ್ಲದರ ನಡುವೆ ಆಗಿನಸ ಸಿಎಂ ಸಿದ್ದರಾಮಯ್ಯ ಅವರು ಇದನ್ನು ಸಿಬಿಐಗೆ ಒಪ್ಪಿಸಿದ್ದರು.
ಪ್ರಕರಣದ ಹಿನ್ನಲೆ:
2017ರ ಡಿಸೆಂಬರ್ 6ರಂದು ಹೊನ್ನಾವರದ ಮೀನುಗಾರ ಪರಮೇಶ್ ಮೇಸ್ತ ನಾಪತ್ತೆಯಾಗಿದ್ದ. ಇದಲ್ಲದೆ, ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿ ದೇವಾಸ್ಥಾನದ ಹಿಂಭಾಗದ ಹಟ್ಟಿ ಕೆರೆಯಲ್ಲಿ ಶವ ಪತ್ತೆಯಾಗಿತ್ತು. ಇದು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸಿತು. 2017 ಡಿಸೆಂಬರ್ 11 ರಂದು ಮೇಸ್ತಾ ಅವರನ್ನು ಕೊಲ್ಲಲಾಯಿತು ಎಂಬ ಆರೋಪ ಕೇಳಿಬಂತು. ಕಾರವಾರ, ಹೊನ್ನಾವರ, ಕುಮಟಾ, ಮುಂಡಗೋಡದಲ್ಲಿ ಹಿಂದೂಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ಕುಮಟಾದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಲಾಯಿತು. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಯಿತು. ಪೊಲೀಸರಿಗೆ ಗಾಯಗಳಾಗಿದ್ದವು, ವಾಹನಗಳು ಜಖಂಗೊಂಡಿದ್ದವು.
ಪರೇಶ್ ಮೇಸ್ತಾ ಅವರ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಲಾಗುವುದು ಎಂದು ಅಂದಿನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ವಿರೋಧ ಪಕ್ಷಗಳ ಹೋರಾಟಕ್ಕೆ ಮಣಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ. ಪೋಷಕರ ಒತ್ತಾಯದ ಮೇರೆಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಈ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ. ನಾಲ್ಕೂವರೆ ವರ್ಷಗಳ ಕಾಲ ತನಿಖೆ ನಡೆಸಿದ ನಂತರ ಸಿಬಿಐ ತನ್ನ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಸಿಬಿಐ ಅಧಿಕಾರಿಗಳು ಇಂದು ಹೊನ್ನಾವರದ ನ್ಯಾಯಾಲಯಕ್ಕೆ ಪ್ರಕರಣದ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಮೇಸ್ತನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಆರೋಪಿಗಳನ್ನು ದೋಷ ಮುಕ್ತಗೊಳಿಸಬಹುದು ತಿಳಿಸಿದೆ.
RAIN ALEART KARNATAKA: ರಾಜ್ಯದಲ್ಲಿ 5 ಇನ್ನೂ ದಿನ ಭಾರಿ ಮಳೆ: ಹವಾಮಾನ ಇಲಾಖೆಯಿಂದ ಮಾಹಿತಿ
BREAKING NEWS ; ಮತ್ತೊಮ್ಮೆ ಕಳಚಿದೆ ‘ಪಾಪಿ’ ಮುಖವಾಡ ; ಭೂಗತ ಪಾತಕಿ ‘ದಾವೂದ್’ ಬಗ್ಗೆ ಕೇಳಿದ್ರೆ ‘ಪಾಕ್’ ಗಪ್ ಚುಪ್