ಬೆಂಗಳೂರು: ನಿನ್ನೆ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಉಮಾದೇವಿ ಸಾವನ್ನಪ್ಪಿದ್ದರು. ಪ್ರಕರಣ ಸಂಬಂಧ ಕುಟುಂಬದ ಒಬ್ಬರಿಗೆ ಸರ್ಕಾರಿ ಹುದ್ದೆ ನೀಡುವಂತೆ ಉಮಾದೇವಿ ಕುಟುಂಬದವರು ಆಗ್ರಹಿಸಿದ್ದಾರೆ.
ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮೃತ ಉಮಾದೇವಿ ಅಳಿಯ ರವಿ ‘ ನಮ್ಮ ಕುಟುಂಬಅತ್ತೆ ಮೇಲೆ ಅವಲಂಬಿತವಾಗಿತ್ತು, ನಮ್ಮ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು, ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯ ಗಾಯತ್ರಿ ನಗರ ವಾಸವಿದ್ದ ಮೃತ ಉಮಾದೇವಿ ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಉಮಾದೇವಿ ಗಂಡ ಐದು ವರ್ಷದ ಹಿಂದೆ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಮಗಳು ಸುನೀತಾ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕೆಎಸ್ಆರ್ಟಿಸಿ ಬಸ್ ಚಾಲಕ ಮಾರುತಿಯನ್ನು ಬಂಧಿಸಿದ್ದಾರೆ.
ಘಟನೆ ಹಿನ್ನೆಲೆ?
ಉಮಾ ಅವರು ಭಾನುವಾರ ಶ್ರೀನಗರದಲ್ಲಿರುವ ಪುತ್ರಿ ವನಿತಾ ಮನೆಗೆ ಹೋಗಿದ್ದರು. ಸೋಮವಾರ ಬೆಳಗ್ಗೆ ವನಿತಾ ಜತೆಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಬೆಳಗ್ಗೆ 9:30ರ ಸುಮಾರಿಗೆ ವಾಟಾಳ್ ನಾಗರಾಜ್ ರಸ್ತೆಯ ಸುಜಾತ ಥಿಯೇಟರ್ ಬಳಿ ಹೋಗುವಾಗ ರಸ್ತೆ ಗುಂಡಿ ಕಂಡಿದೆ. ಹೀಗಾಗಿ ವನಿತಾ ಗುಂಡಿ ತಪ್ಪಿಸಲು ಹೋಗಿದ್ದಾರೆ. ಈ ವೇಳೆ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಸ್ಕೂಟರ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಎಸ್ಐ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಉಮಾ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ಮೃತಪಟ್ಟಿದ್ದಾರೆ.
BIG NEWS: ಕಳಪೆ ರಸ್ತೆಯಿಂದ ಅಪಘಾತವಾಗಿ ಪ್ರಾಣ ಕಳೆದುಕೊಂಡ್ರೆ ಅಧಿಕಾರಿಗಳೇ ಹೊಣೆ: ಭಾರತೀಯ ಹೆದ್ದಾರಿ ಪ್ರಾಧಿಕಾರ
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ಬಹುಮುಖ್ಯ ಮಾಹಿತಿ