ನವದೆಹಲಿ : ಪ್ರಧಾನಿ ಮೋದಿ ಅತ್ಯಾಚಾರಿಗಳ ಪರ ನಿಲ್ಲುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದ್ದಾರೆ.
ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ ವಿಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಮೋದಿ ಕೆಂಪುಕೋಟೆಯಲ್ಲಿ ಮಹಿಳೆಯರ ಬಗ್ಗೆ ಗೌರವದಿಂದ ಮಾತುಗಳನ್ನಾಡುತ್ತಾರೆ. ಆದರೆ ವಾಸ್ತವದಲ್ಲಿ ಅತ್ಯಾಚಾರಿಗಳಿಗೆ ಬೆಂಬಲವಾಗಿ ನಿಲ್ಲುತ್ತಾರೆ. ಪ್ರಧಾನಿ ಮೋದಿ ಅವರು ಮಹಿಳೆಯರಿಗೆ ಮೋಸ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳ ಕ್ಷಮಾಪಣೆಗೆ ತನಿಖಾ ಸಂಸ್ಥೆಯು ಕೇಂದ್ರದಿಂದ ಸೂಕ್ತ ಆದೇಶಗಳನ್ನು ಪಡೆದುಕೊಂಡಿದೆ. 11 ಅಪರಾಧಿಗಳ ಬಿಡುಗಡೆಗೆ ಕೇಂದ್ರವು ಅನುಮೋದನೆ ನೀಡಿದೆ ಎಂದು ಗುಜರಾತ್ ಸರ್ಕಾರ ಅಫಿಡವಿಟ್ನಲ್ಲಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರಧಾನಿ ವಿರುದ್ಧ ವ್ಯಾಗ್ದಾಳಿ ನಡೆಸಿದ್ದಾರೆ.
लाल किले से महिला सम्मान की बात लेकिन असलियत में 'बलात्कारियों' का साथ।
प्रधानमंत्री के वादे और इरादे में अंतर साफ है, PM ने महिलाओं के साथ सिर्फ छल किया है।
— Rahul Gandhi (@RahulGandhi) October 18, 2022
BREAKING: ಸುಪ್ರೀಂ ಕೋರ್ಟ್ ಆದೇಶ ಪಾಲಿಸದ ಲೋಕಾಯುಕ್ತಕ್ಕೆ ಬಿಗ್ ಶಾಕ್: ಹೈಕೋರ್ಟ್ ನೋಟಿಸ್