ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು (KPSC) ಮೂರು ಇಲಾಖೆಗಳ ನೇಮಕಾತಿಗಳ ಫಲಿತಾಂಶಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಲೋಕೋಪಯೋಗಿ ಇಲಾಖೆಯ 660 ಸಹಾಯಕ ಎಂಜಿನಿಯರ್ ಹುದ್ದೆಗಳ ಸಂದರ್ಶನಕ್ಕೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಮೂರಾರ್ಜಿ ವಸತಿ ಶಾಲೆಗಳ ಆರ್ಟ್ ಮತ್ತು ಕ್ರಾಫ್ಟ್ ನ 47 ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕೆಪಿಎಸ್ ಸಿ ಪ್ರಕಟಿಸಿದೆ.
ಆಯುಷ್ ಇಲಾಖೆಯ ಗ್ರೂಪ್ ಸಿ ವೃಂದದ ಅಂತಿಮ ಆಯ್ಕೆ ಪಟ್ಟಿಯನ್ನೂ ಸಹ ಕೆಪಿಎಸ್ ಸಿ ಪ್ರಕಟಿಸಿದೆ. ಅಭ್ಯರ್ಥಿಗಳು ಕೆಪಿಎಸ್ ಸಿ ಅಧಿಕೃತ ವೆಬ್ ಸೈಟ್ www.kpsc.com ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
BIGG NEWS : ಮುರುಘಾಶ್ರೀಗಳಿಗೆ ಮತ್ತೊಂದು ಶಾಕ್ : ಶ್ರೀಗಳ ವಿರುದ್ಧ 3ನೇ ಎಫ್ಐಆರ್ ದಾಖಲಿಸಿದ ಪೊಲೀಸರು