ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು,ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIGG NEWS : ರಾಜ್ಯದಲ್ಲಿ ಡೆಂಗ್ಯೂ ಉಲ್ಬಣ : 7 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ!
ನಾಳೆಯಿಂದ ಅಕ್ಟೋಬರ್ 22 ರ ವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.