ಬೆಂಗಳೂರು : ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಅವ್ಯವಸ್ಥೆಗಳ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಇನ್ನು ಟ್ಟಿಟ್ಟರ್ನಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು.
ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ.1/7— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 19, 2022
ಪಾಲಿಕೆ ಮಾಡಿದ ಪಾಪಕ್ಕೆ ನತದೃಷ್ಟ ಮಹಿಳೆ ಉಮಾದೇವಿ ಅವರು ಬಲಿಯಾಗಿದ್ದಾರೆ. ಅವರಿಗೆ ಪರಿಹಾರ ಕೊಟ್ಟು ಕೈತೊಳೆದುಕೊಳ್ಳುವುದಲ್ಲ. ಇನ್ನಾದರೂ ಗುಂಡಿಗಳನ್ನು ಮುಚ್ಚಬೇಕು ಹಾಗೂ ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು
ಪಾಲಿಕೆ ಮಾಡಿದ ಪಾಪಕ್ಕೆ ನತದೃಷ್ಟ ಮಹಿಳೆ ಉಮಾದೇವಿ ಅವರು ಬಲಿಯಾಗಿದ್ದಾರೆ. ಅವರಿಗೆ ಪರಿಹಾರ ಕೊಟ್ಟು ಕೈತೊಳೆದುಕೊಳ್ಳುವುದಲ್ಲ. ಇನ್ನಾದರೂ ಗುಂಡಿಗಳನ್ನು ಮುಚ್ಚಬೇಕು ಹಾಗೂ ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. 6/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 19, 2022
ಕಳೆದೆರಡು ದಿನಗಳ ಹಿಂದೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮಹಿಳೆ ಮಹಿಳೆ ಶ್ರೀಮತಿ ಉಮಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ರಾಜ್ಯ ಸರಕಾರ ಅವರಿಗೆ ಸುಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂಬುದು ನನ್ನ ಒತ್ತಾಯ ತಿಳಿಸಿದ್ದಾರೆ
ಮೃತ ಮಹಿಳೆ ಶ್ರೀಮತಿ ಉಮಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ರಾಜ್ಯ ಸರಕಾರ ಅವರಿಗೆ ಸುಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂಬುದು ನನ್ನ ಒತ್ತಾಯ.7/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 19, 2022