ಹೈದರಾಬಾದ್: ಆಂಧ್ರಪ್ರದೇಶದ ಪ್ರಕಾಸಂ ಜಿಲ್ಲೆಯಲ್ಲಿರುವ ಶಿವನ ದೇವಾಲಯದ ನಂದಿ ವಿಗ್ರಹವನ್ನು ಸೋಮವಾರ ನಸುಕಿನಲ್ಲಿ ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
BIGG NEWS: ಮುರುಘಾಮಠಕ್ಕೆ ಹೊಸ ಆಡಳಿತಾಧಿಕಾರಿ ನೇಮಿಸುವಂತೆ ಆಗ್ರಹ; ಸಿಎಂ ಬೊಮ್ಮಾಯಿಗೆ ಡಾ.ಮಧುಕುಮಾರ್ ಪತ್ರ
ಎನ್ ಜಿ ಪಾಂಡು ಬ್ಲಾಕ್ನ ಕಣಪರ್ತಿ ಗ್ರಾಮದ ದೇವಸ್ಥಾನದಲ್ಲಿರುವ ಮೂರ್ತಿಯನ್ನು ಶಿವನ ಗರ್ಭಗುಡಿಯ ಮುಂಭಾಗದಲ್ಲಿ ಪ್ರತಿಷ್ಠಾಪಿಸಲಾಗಿತ್ತು.”ದೇಗುಲದಿಂದ ಏನನ್ನಾದರೂ ಕದಿಯಲು ಪ್ರಯತ್ನಿಸುತ್ತಿದ್ದ ದುಷ್ಕರ್ಮಿಗಳು ಕಳ್ಳರು ಎಂದು ಶಂಕಿಸಲಾಗಿದೆ” ಎಂದು ಪ್ರಕಾಸಂ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಲ್ಲಿಕಾ ಗಾರ್ಗ್ ಹೇಳಿದ್ದಾರೆ.
“ದುಷ್ಕರ್ಮಿಗಳನ್ನು ಬಂಧಿಸಲು ಸ್ಥಳೀಯ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ. ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಪೊಲೀಸರು ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಗಳನ್ನು ಸಹ ಪರಿಶೀಲಿಸುತ್ತಿದ್ದಾರೆ ಎಂದು ಗಾರ್ಗ್ ಹೇಳಿದರು.”ಭಗ್ನವಾಗಿರುವ ನಂದಿ ವಿಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಅದನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಅವರು ಹೇಳಿದರು.