ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಇದರಿಂದ ಜನರು ರೋಸಿ ಹೋಗಿದ್ದಾರೆ. ಇದೀಗ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS: ಸಿಎಂಗೆ ಧಮ್ ಇದ್ರೆ ಸಿದ್ದರಾಮಯ್ಯನ ಮೇಲಿನ ಆರೋಪಗಳನ್ನು ತನಿಖೆ ಮಾಡಿಸಲಿ; ಹೆಚ್ ಡಿಕೆ ಸವಾಲ್
ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ.ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಇದೇ ವೇಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.