ನವದೆಹಲಿ: ಕಾಂಗ್ರೆಸ್(Congress)ಗೆ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕೇಂದ್ರದ ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರು ಗೆದ್ದಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಅಕ್ಟೋಬರ್ 17 ಅಂದ್ರೆ, ಸೋಮವಾರ ಮತದಾನ ನಡೆದಿತ್ತು. ಇಂದು ಮತಎಣಿಕೆ ನಡೆದಿದ್ದು, ಅದರ ಫಲಿತಾಂಶ ಪ್ರಕಟವಾಗಿದೆ.
#CongressPresidentElection | Mallikarjun Kharge wins the Congress presidential elections with 7897 votes, Shashi Tharoor got about 1000 votes; 416 votes rejected
(File photo) pic.twitter.com/fyBtRF9Tex
— ANI (@ANI) October 19, 2022
ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಗೆದ್ದಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿಯಾದ ಶಶಿ ತರೂರ್ ಅವರಿಗೆ ಕೇವಲ 1072 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
BIGG NEWS: ಮಳವಳ್ಳಿ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಿಸಿದ ಜಮೀರ್