ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ಅಕಾಡೆಮಿಗಳ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಲಾಖೆಯ ಜಂಟಿ ನಿರ್ದೇಶಕರನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಇದನ್ನ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹೊಣೆಯನ್ನು ಸ್ವತಃ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ವಹಿಸಿಕೊಳ್ಳಲಿದ್ದು, ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ. ಹೊಸ ಅಧ್ಯಕ್ಷರ ನೇಮಕದವರೆಗೂ ಸುನೀಲ್ ಕುಮಾರ್ ಸಾರಥ್ಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುನ್ನಡೆಯಲಿದೆ.
ಕನ್ನಡ ಸಂಸ್ಕೃತಿ ಇಲಾಖೆಯ ಅಧೀನದಲ್ಲಿ ಬರುವ ವಿವಿಧ ಅಕಾಡೆಮಿಗಳ ಅಧ್ಯಕ್ಷರು ಹಾಗೂ ಸದಸ್ಯರು 3 ವರ್ಷಗಳ ಅಧಿಕಾರವಧಿ 2022ರ ಅಕ್ಟೋಬರ್ 15ರಂದು ಪೂರ್ಣಗೊಂಡಿದೆ. ಸರ್ಕಾರ ಇನ್ನೂ ಹೊಸಬರ ನೇಮಕ ಮಾಡಿಲ್ಲ. ವಿವಿಧ ನಿಗಮ ಮಂಡಳಿಗಳ ಜೊತೆಗೆ ಅಕಾಡೆಮಿ ಮತ್ತು ಪ್ರಾಧಿಕಾರಗಳ ನೇಮಕವೂ ಬಾಕಿ ಉಳಿದುಕೊಂಡಿದೆ. ಹಾಗಾಗಿ ಹೊಸಬರು ಆಯ್ಕೆ ಆಗುವವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರನ್ನು ಆಡಳಿತಾಧಿಕಾರಿಗಳಾಗಿ ನೇಮಿಸಲಾಗಿದ್ದು, ಅವರೇ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ.