ಶಿವಮೊಗ್ಗ : ಅಡಿಕೆ ಬೆಳೆಗಾರರು ಎಲೆಚುಕ್ಕಿ, ಕೊಳೆರೋಗ ಮತ್ತು ಇತರೆ ಗಂಭೀರ ಸಮಸ್ಯೆಗಳಿಂದ ಬಳಲುತ್ತಿದ್ದು, ಇದಕ್ಕೆ ಸೂಕ್ತ ಪರಿಹಾರೋಪಾಯಗಳನ್ನು ಒದಗಿಸುವಂತೆ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರಿಗೆ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ( Farmer CM BS Yediyurappa ) ಇಂದು ಪತ್ರ ಮುಖೇನ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಅಡಿಕೆ ಬೆಳೆಯುವ ರಾಜ್ಯವಾಗಿದ್ದು, ಒಟ್ಟು ಪ್ರದೇಶದ 68% ಮತ್ತು ದೇಶದ ಒಟ್ಟು ಅಡಿಕೆ ಉತ್ಪಾದನೆಯ 80% ಕೊಡುಗೆ ನೀಡುತ್ತದೆ. ಪ್ರಸ್ತುತ ಕರ್ನಾಟಕದಲ್ಲಿ ಅಡಿಕೆಯನ್ನು 5.02 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, 05 ದಶಲಕ್ಷಕ್ಕೂ ಹೆಚ್ಚು ಜನರು ಅಡಿಕೆ ಕೃಷಿಯ ಮೇಲೆ ಅವಲಂಬಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ 1.02 ಲಕ್ಷ ಹೆಕ್ಟೇರ್ ಪ್ರದೇಶವನ್ನು ಅಡಿಕೆ ಬೆಳೆಯಲು ಬಳಸಲಾಗುತ್ತಿದ್ದು, ಜಿಲ್ಲೆಯ ಆರ್ಥಿಕತೆಯ 60% ಅಡಿಕೆ ಉತ್ಪಾದನೆ ಇದ್ದು, ದೊಡ್ಡ ಪ್ರಮಾಣದ ತೆರಿಗೆ ಮತ್ತು ಸೆಸ್ ನೀಡುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅಡಿಕೆ ಕೃಷಿಗೆ ಹೆಚ್ಚಿನ ಹಾನಿಯಾಗುತ್ತಿದೆ. ಜೈವಿಕ ಮತ್ತು ಅಜೈವಿಕ ಅಂಶಗಳು ರೈತರಿಗೆ ದೊಡ್ಡ ಆರ್ಥಿಕ ನಷ್ಟವನ್ನು ಉಂಟುಮಾಡುತ್ತಿವೆ. ಇದಲ್ಲದೆ, ಹವಾಮಾನ ಪರಿಸ್ಥಿತಿಗಳಲ್ಲಿನ ಬದಲಾವಣೆಗಳು ಎಲೆಚುಕ್ಕೆ, ಹಣ್ಣಿನಂತಹ ರೋಗಗಳಿಗೆ ಅನುಕೂಲಕರವಾಗಿದ್ದು, ಕೊಳೆರೋಗ, ಗ್ಯಾನೊಡೆರಾಮಾ ಕೊಳೆ ರೋಗ ಇತ್ಯಾದಿಗಳು ಇಳುವರಿಯಲ್ಲಿ ಸಾಕಷ್ಟು ನಷ್ಟವನ್ನುಂಟು ಮಾಡಿದೆ.
ನಿರಂತರ ಮಳೆಯಿಂದಾಗಿ ಮಣ್ಣಿನಿಂದ ಪೆÇೀಷಕಾಂಶಗಳ ನಾಶವಾಗುತ್ತಿದ್ದು ಈ ರೋಗದ ತೀವ್ರತೆ ಹೆಚ್ಚಾಗಿದೆ. ಹಾಗೂ ಗಾಳಿ ಮೂಲಕ ರೋಗ ಹರಡುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ಅಡಿಕೆ ಉತ್ಪಾದನೆ ಮತ್ತು ಇಳುವರಿ ನಷ್ಟದಿಂದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯ ರೈತರು ತೀವ್ರ ಆರ್ಥಿಕ ನಷ್ಟ ಮತ್ತು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಈ ಎಲ್ಲ ಜಿಲ್ಲೆಗಳ ರೈತರು ಮತ್ತು ಅಡಿಕೆ ಬೆಳೆಗಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿಯೂ ರೈತ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದೆ.
ರೈತರು ಮತ್ತು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಈ ಗಂಭೀರ ಪರಿಸ್ಥಿತಿಯ ನಡುವೆ ಅಡಕೆಯ ಬೆಳವಣಿಗೆ ಮತ್ತು ಇಳುವರಿ ಮೇಲೆ ಪರಿಣಾಮ ಬೀರುವ ರೋಗಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವಂತಹ ಆತ್ಮವಿಶ್ವಾಸವನ್ನು ಮೂಡಿಸುವ ಕ್ರಮಗಳ ಮೂಲಕ ರೈತರ ಜೀವನದಲ್ಲಿ ಮಧ್ಯಪ್ರವೇಶಿಸಲು ಇದು ಸಕಾಲವಾಗಿದೆ. ಅಡಿಕೆ ಬೆಳೆಗಾರರ ಹಿತಾಸಕ್ತಿ ಕಾಪಾಡಲು ಕರ್ನಾಟಕ ಸರ್ಕಾರವು ಈಗಾಗಲೇ ರೋಗ ನಿರ್ವಹಣೆಗಾಗಿ ಸಸ್ಯ ಸಂರಕ್ಷಣಾ ರಾಸಾಯನಿಕಗಳನ್ನು ಒದಗಿಸುತ್ತಿದ್ದರೂ ರೈತರಿಗೆ ಉಂಟಾದ ನಷ್ಟವನ್ನು ಸರಿದೂಗಿಸಲು ಇದು ಸಾಕಾಗುವುದಿಲ್ಲ ಆದ್ದರಿಂದ ಅಲ್ಪಾವಧಿಯ ಮತ್ತು ದೀರ್ಘಾವಧಿಯ ಕ್ರಮಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಸರ್ಕಾರದ ಸಹಕಾರ ಅತ್ಯಗತ್ಯವಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪರಿಹಾರದಂತೆ ಅಡಿಕೆ ಉತ್ಪಾದನೆಯ ನಷ್ಟಕ್ಕೆ ಸೂಕ್ತ ಪರಿಹಾರ ಅಲ್ಲದೇ, ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳನ್ನು ಅಧ್ಯಯನ ಮಾಡಲು ಅಡಿಕೆ ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಲು ಮತ್ತು ಈ ನಿಟ್ಟಿನಲ್ಲಿ ಅಡಿಕೆ ಬೆಳೆಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಸೂಕ್ತವಾದ ಕಾರ್ಯತಂತ್ರಗಳನ್ನು ರೂಪಿಸಲು ವಿನಂತಿಸಲಾಗಿದೆ.
ಚಿತ್ರದುರ್ಗ: ಹಿರಿಯೂರು ನಗರದ ಪೊಲೀಸ್ ಠಾಣೆ ಮುಂಭಾಗದಲ್ಲೇ ರಸ್ತೆ ಗುಂಡಿ, ಕಣ್ ಮುಚ್ಚಿ ಕುಳಿತ ನಗರಸಭೆ
ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಸೂಕ್ತ ಪರಿಹಾರ ಕ್ರಮಗಳನ್ನು ಶಿಫಾರಸು ಮಾಡಲು ಕೇಂದ್ರ ತಂಡವನ್ನು ಕಳುಹಿಸಲು ನಾನು ನಿಮ್ಮನ್ನು ಈ ಮೂಲಕ ವಿನಂತಿಸುತ್ತೇನೆ ಎಂದು ಅವರು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.