ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯ ( PSI Recruitment Scam ) ಅಕ್ರಮ ಸಂಬಂಧ ಸಿಐಡಿ ಅಧಿಕಾರಿಗಳು ( CID Officer ) ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆ, ತಾಲೂಕುಗಳಲ್ಲಿ ದಾಳಿ ನಡೆಸಿದ್ದು, ಅಕ್ರಮ ಸಂಬಂಧ 25 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ, ಇಂದು ಸಿಐಡಿ ಅಧಿಕಾರಿಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಸಿಐಡಿ ಎಸ್ಪಿ ರಮೇಶ್ ಬಾನೋತ್ ನೇತೃತ್ವದಲ್ಲಿ ಸಿಐಡಿ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾತಂರ, ಕೋಲಾರ, ಕೆಜಿಎಫ್, ತುಮಕೂರು, ಚಿತ್ರದುರ್ಗ ಹಾಗೂ ಚಳ್ಳಕೆರೆಯಲ್ಲಿ ಸಿಐಡಿ ಪೊಲೀಸರು ಕಾರ್ಯಾಚರಣೆಯನ್ನು ಇಂದು ನಡೆಸಿದ್ದಾರೆ.
ಚಿತ್ರದುರ್ಗ: ಹಿರಿಯೂರು ನಗರದ ಪೊಲೀಸ್ ಠಾಣೆ ಮುಂಭಾಗದಲ್ಲೇ ರಸ್ತೆ ಗುಂಡಿ, ಕಣ್ ಮುಚ್ಚಿ ಕುಳಿತ ನಗರಸಭೆ
ಇಂದು ಬೆಳಿಗ್ಗೆ 4 ಗಂಟೆಯಿಂದ 30 ತಂಡಗಳ 100ಕ್ಕೂ ಹೆಚ್ಚು ಸಿಐಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಇಂದಿನ ಕಾರ್ಯಾಚರಣೆಯಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮ ಸಂಬಂಧ 25 ಜನರನ್ನು ಸಿಐಡಿ ವಿಭಾಗ ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ.