ನವದೆಹಲಿ : ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಗೆ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಇದೀಗ ದೆಹಲಿಯ ಖರ್ಗೆ ನಿವಾಸಕ್ಕೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ ಶುಭ ಕೋರಿದರು.
ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು. ಪ್ರತಿಭೆ ಮತ್ತು ಅನುಭವವನ್ನು ಮೈಗೂಡಿಸಿಕೊಂಡ ಖರ್ಗೆಯವರಿಗೆ ಕಾಂಗ್ರೆಸ್ ಪಕ್ಷವನ್ನು ಯಶಸ್ಸಿ ಹಾದಿಯಲ್ಲಿ ಮುನ್ನಡೆಸುವ ಶಕ್ತಿ ಇದೆ ಎಂದು ಸೋನಿಯಾ ಗಾಂಧಿ ಹೇಳಿದರು. ಇನ್ನೂ, ನೂತನ ಕಾಂಗ್ರೆಸ್ ಅಧ್ಯಕ್ಷರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಈ ವೇಳೆ ಮಲ್ಲಿಕಾರ್ಜುನ್ ಖರ್ಗೆ ಪತ್ನಿ ಹಾಗೂ ಪುತ್ರ ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ರು.
ಇನ್ನೂ, ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ, ಅವರ ಹೊಸ ಜವಾಬ್ದಾರಿಗಾಗಿ ನನ್ನ ಶುಭ ಹಾರೈಕೆಗಳು ಅವರ ಮುಂದೆ ಫಲಪ್ರದವಾದ ಅಧಿಕಾರಾವಧಿ ಬರಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕ ಖರ್ಗೆ ಕಾಂಗ್ರೆಸ್ ಗೆ ಕಿಂಗ್ ಆಗಿದ್ದಾರೆ. ಹೌದು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆ (Congress president’s election) ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಯ್ಕೆಯಾಗಿದ್ದಾರೆ.
ಇಂದು ಮತಎಣಿಕೆ ನಡೆದಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿಯಾದ ಶಶಿ ತರೂರ್ ಅವರಿಗೆ ಕೇವಲ 1072 ಮತಗಳನ್ನು ಪಡೆದಿದ್ದಾರೆ. ಈಮೂಲಕ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್(Congress)ಗೆ ಅಧ್ಯಕ್ಷೀಯ ಚುನಾವಣೆಯು ಅಕ್ಟೋಬರ್ 17 ಅಂದ್ರೆ, ಸೋಮವಾರ ನಡೆದಿತ್ತು. ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಆಯ್ಕೆಯಾಗಿದ್ದು, ಈ ಹಿನ್ನೆಲೆ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.
ಅಡಿಕೆ ಎಲೆಚುಕ್ಕಿ ರೋಗಗಳಿಗೆ ಪರಿಹಾರೋಪಾಯ ಕೋರಿ ಕೇಂದ್ರ ಸಚಿವರಿಗೆ ಬಿ.ಎಸ್.ಯಡಿಯೂರಪ್ಪ ಮನವಿ
BREAKIGN NEWS: ಮುಂಬೈನ ಮೂರು ಸ್ಥಳಗಳಲ್ಲಿ ಬಾಂಬ್ ಬೆದರಿಕೆ, ಪೊಲೀಸರಿಂದ ಹೈ ಅಲರ್ಟ್