ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ನವೆಂಬರ್ 11ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಾಳೆ ಬಿಜೆಪಿ ಸಿದ್ಧತಾ ಸಭೆ ನಡೆಯಲಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಶಾಸಕರು, ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳ ಮುಖಂಡರು ಸಭೆಯಲ್ಲಿ ಬಾಗಿಯಾಗಲಿದ್ದು, ಪ್ರಧಾನಿ ಮೋದಿ ಕಾರ್ಯಕ್ರಮ ಯಶಸ್ವಿಗೊಳಿಸುವ ಕುರಿತು ಸಭೆ ನಡೆಸಲಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಿ ನಂತರ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
BIGG NEWS ; ತಾಯಿ, ತಂಗಿ, ತಮ್ಮನನ್ನ ಬರ್ಬರವಾಗಿ ಕೊಂದ ಕಿರಾತಕನಿಗೆ ‘ಗಲ್ಲು ಶಿಕ್ಷೆ’ ವಿಧಿಸಿದ ಕೋರ್ಟ್