ಬೆಂಗಳೂರು: ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಮೈಸೂರಿನ ಖಾಸಗಿ ಹೋಟೆಲ್ನಲ್ಲಿ 2 ದಿನಗಳ ಕಾಲ ನಡೆಯುತ್ತಿರುವ ಜೆಡಿಎಸ್ ಸಮಾಲೋಚನಾ ಕಾರ್ಯಾಗಾರಕ್ಕೆ ಚಾಲನೆ ನೀಡಿ ನಂತರ ಮಾತನಾಡಿದರು.
ಈ ಪಂಚರತ್ನ ಯೋಜನೆಗಳನ್ನು ಮುಂದಿನ ಆರು ತಿಂಗಳ ಕಾಲ ರಾಜ್ಯದ ಪ್ರತಿ ಮನೆಮನೆಗಳಿಗೆ ತಲುಪಿಸುವ ಉದ್ದೇಶವನ್ನು ಪಂಚರತ್ನ ರಥಯಾತ್ರೆ ಹೊಂದಿದೆ. ನವೆಂಬರ್ 1 ರಿಂದ (ಕನ್ನಡ ರಾಜ್ಯೋತ್ಸವ ದಿನ) ರಥಯಾತ್ರೆಗೆ ಚಾಲನೆ ನೀಡಲಿದ್ದೇವೆ. ಕೋಲಾರದ ಮುಳಬಾಗಿಲಿನ ಗಣೇಶ ಮತ್ತು ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ರಥಯಾತ್ರೆ ಪ್ರಾರಂಭಿಸಲಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು . ದೇಶದಲ್ಲೇ ಒಂದು ಚುನಾಯಿತ ಸರಕಾರ ಯಾವ ರೀತಿ ಕಾರ್ಯಕ್ರಮಗಳನ್ನು ಕೊಡಬಹುದು ಎಂಬುದನ್ನು ಜೆಡಿಎಸ್ ಪಕ್ಷ ಪಂಚರತ್ನ ಕಾರ್ಯಕ್ರಮದ ಮೂಲಕ ರಾಜ್ಯದ ಜನತೆಗೆ ತಿಳಿಸಲಿದೆ ಎಂದರು,
ಜೆಡಿಎಸ್ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಮಿಷನ್ 123 ಗುರಿ ದಾಟಿ, ಅಧಿಕಾರ ಹಿಡಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು.ಜೆಡಿಎಸ್ ಅಸ್ಥಿತ್ವದಲ್ಲಿ ಇಲ್ಲ, ಆ ಪಕ್ಷಕ್ಕೆ ಅಭ್ಯರ್ಥಿಗಳೇ ಇಲ್ಲ ಎಂದು ಹೇಳುವರಿಗೆ ಹೀಗೆ ಹೇಕುವ ಮೂಲಕ ಮಾಜಿ ಮುಖ್ಯಮಂತ್ರಿಗಳು ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಮಟ್ಟದ ಎರಡು ದಿನಗಳ ಕಾರ್ಯಾಗಾರ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು 150 ಸ್ಥಾನ ಗೆಲ್ಲುತ್ತೇವೆ ಎನ್ನುತ್ತಾರೆ. ಅವರಿಗೆ ಎಲ್ಲಿ ಅಭ್ಯರ್ಥಿಗಳು ಇದ್ದಾರೆ. ಇನ್ನೂ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಸಿಕ್ಕಿಲ್ಲ. ನಮ್ಮ ಪಂಚರತ್ನ ಕಾರ್ಯಕ್ರಮಕ್ಕೆ ಸಿಗುತ್ತಿರುವ ಉತ್ತಮ ಬೆಂಬಲ ನೋಡಿ ಹಲವರು ನಮ್ಮ ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ ಎಂದು ಹೇಳಿದರು.
Headache ; ತಲೆನೋವಿನಲ್ಲಿ ಎಷ್ಟು ವಿಧ.? ಕಾರಣವೇನು.? ನಿವಾರಸೋ ಬಗೆ ಹೇಗೆ.? ಇಲ್ಲಿದೆ ಮುಖ್ಯ ಮಾಹಿತಿ
ಕೋಲಾರ : ಹಾಸ್ಟೆಲ್ ನಲ್ಲಿ ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 34 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ