ಬೆಂಗಳೂರು : 2012-13. 2014-15 ರ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ಸಿಐಡಿ ವಿಶೇಷ ತನಿಖಾ ತಂಡ 38 ಮಂದಿ ಶಿಕ್ಷಕರನ್ನು ಬಂಧಿಸಿದ್ದಾರೆ.
ರಾಜ್ಯದ 51 ಕಡೆ ದಾಳಿ ನಡೆಸಿದ ಸಿಐಡಿ ವಿಶೇಷ ತನಿಖಾ ತಂಡ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿದ್ದ 38 ಮಂದಿ ಶಿಕ್ಷಕರನ್ನು ಬಂಧಿಸಿದೆ.
ಕೋಲಾರದಲ್ಲಿ 24, ಬೆಂಗಳೂರು ದಕ್ಷಿಣದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 4 , ಚಿತ್ರದುರ್ಗದಲ್ಲಿ 5 ಮಂದಿ ಸೇರಿ ಒಟ್ಟು 38 ಮಂದಿ ಶಿಕ್ಷಕರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶಿಕ್ಷಕರ ನೇಮಕಾತಿ(Recruitment of teachers) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ(CID)ಅಧಿಕಾರಿಗಳು ವಿವಿಧ ಜಿಲ್ಲೆಯ ಹಲವು ಶಾಲೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದರು. ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾದವರನ್ನು ಬಲೆಗೆ ಬೀಳಿಸುತ್ತಿದ್ದಾರೆ.
ವಾಟ್ಸಾಪ್ ಬಳಕೆದಾರರಿಗೆ Good News ; ‘ಕಾಲ್ ಲಿಂಕ್’ ವೈಶಿಷ್ಟ್ಯ ಬಿಡುಗಡೆ, ‘ವೀಡಿಯೊ ಕಾಲ್’ ಈಗ ಇನ್ನಷ್ಟು ಸುಲಭ