ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ ಯುವತಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪ್ಯಾರಾಮೆಡಿಕಲ್ ಕೌಶಲ್ಯ ತರಬೇತಿ ಮತ್ತು ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಅರ್ಹಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ 1500 ನಿರುದ್ಯೋಗಿ ಯುವಕ ಯುವತಿಯರಿಗೆ 500 ಕ್ಕಿಂತ ಹೆಚ್ಚು ಹಾಸಿಗೆ ಹೊಂದಿರುವ ಹಾಗೂ ಎನ್ ಎ ಬಿ ಹೆಚ್ ನಿಂದ ಮಾನ್ಯತೆ ಪಡೆದ ಹಾಸ್ಪಿಟಲ್ ಗಳ ಮೂಲಕ 75 % ಉದ್ಯೋಗ ಖಾತರಿಯೊಂದಿಗೆ ಪ್ಯಾರಾಮೆಡಿಕಲ್ ಕೌಶಲ್ಯ ತರಬೇತಿ ಮತ್ತು ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಅರ್ಹಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನಾಂಕವಾಗಿದ್ದು, ಅರ್ಜಿ ನಮೂನೆಯನ್ನು ಇಲಾಖೆ ವೆಬ್ ಸೈಟ್ www.sw.kar.nic.in ವಿಳಾಸ ನಲ್ಲಿ ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸ್ನ್ಯಾನ್ ಮಾಡಿ ಇ ಮೇಲ್ ವಿಳಾಸ petcparamedical@gmail.com ಕ್ಕೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಏನಾದರೈ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ 080 22207784 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕೃತಅಧಿಸೂಚನೆ ಹೊರಡಿಸಿದೆ.
BIGG NEWS : ಎಚ್ಚರ ವಾಹನ ಸವಾರರೇ ಎಚ್ಚರ : ಇನ್ಮುಂದೆ ಸೀಟ್ ಬೆಲ್ಟ್ ಧರಿಸದಿದ್ದರೆ 1000 ರೂ. ದಂಡ ಫಿಕ್ಸ್