ಬೆಂಗಳೂರು: ಬಿಸಿಯೂಟ ಹಾಗೂ ಹಾಸ್ಟೆಲ್ ಗಳಿಗೆ ಅಡುಗೆ ತಯಾರಿಸಲು ಸಿರಿಧಾನ್ಯ ನೀಡಲು ಚಿಂತನೆ ನಡೆಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವರು 2021ರಲ್ಲಿ ಗರಿಷ್ಠ ಪ್ರಮಾಣದಲ್ಲಿ ಸಿರಿಧಾನ್ಯ ಬೆಳೆದ ಕರ್ನಾಟಕಕ್ಕೆ ‘ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಬಂದಿದೆ. ಬಿಸಿಯೂಟ ಹಾಗೂ ಹಾಸ್ಟೆಲ್ ಗಳಿಗೆ ಅಡುಗೆ ತಯಾರಿಸಲು ಸಿರಿಧಾನ್ಯ ನೀಡಲು ಚಿಂತನೆ ನಡೆಸಲಾಗಿದೆ ಎಂದು ಬಿ.ಸಿ ಪಾಟೀಲ್ ಹೇಳಿದ್ದಾರೆ. ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎಂಬ ಕಾರಣಕ್ಕಾಗಿ ಸಿರಿಧಾನ್ಯ ನೀಡುವ ಬಗ್ಗ ಚಿಂತನೆ ನಡೆಸಲಾಗಿದೆ. ಇದರಿಂದ ಸಿರಿಧಾನ್ಯ ಬೆಳೆಯುವ ರೈತರಿಗೂ ಉತ್ತಮಅವಕಾಶ ಸಿಗಲಿದೆ ಎಂದರು.
ಮುಂದಿನ ವರ್ಷ ಅಂದರೆ 2023ರ ಜನವರಿ 20, 21 ಮತ್ತು 22 ರಂದು ನಗರದಲ್ಲಿ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಆಯೋಜಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ವಿದೇಶಗಳಲ್ಲಿ ರೈತರಿಗೆ ಸಿರಿಧಾನ್ಯದ ಬಗ್ಗೆ ಅರಿವು ಮೂಡಿಸಬೇಕಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿದೆ. ಪ್ರಧಾನಿ ನರೇಂದ್ರ ಮೋದಿ ಸಹ ಸಿರಿಧಾನ್ಯದ ಬಗ್ಗೆ ಮಾತನಾಡಿದ್ದಾರೆ. ಸಿರಿಧಾನ್ಯ ಮೇಳದಲ್ಲಿ ವ್ಯಾಪಾರಸ್ಥರು, ರಫ್ತುದಾರರು ಕೂಡ ಭಾಗಿಯಾಗಲಿದ್ದಾರೆ. ಸಿಎಂ ಮೂಲಕ ಪ್ರಧಾನಿಗೂ ಆಹ್ವಾನ ನೀಡುತ್ತೇವೆ. ಅವರು ಬಂದರೆ ನಮ್ಮ ಶಕ್ತಿ ಮತ್ತಷ್ಟು ಹೆಚ್ಚಲಿದೆ ಎಂದರು.
ಸಿರಿ ಧಾನ್ಯಗಳಲ್ಲಿ ಪೌಷ್ಟಿಕಾಂಶಗಳ ಭಂಡಾರವೇ ಅಡಗಿದ್ದು, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ಈ ಧಾನ್ಯಗಳಲ್ಲಿ ಕಂಡು ಬರುತ್ತದೆ. ಮುಖ್ಯವಾಗಿ ತಾಮ್ರ, ಖನಿಕಾಂಶ, ಪ್ರೋಟೀನ್, ವಿಟಮಿನ್ಸ್ ಮೆಗ್ನೀಷಿಯಂ, ಪಾಸ್ಪರಸ್, ಮ್ಯಾಂಗನೀಸ್, ನಾರಿನಾಂಶ ಹಾಗೂ ಇತರ ಪೌಷ್ಟಿಕ ಸತ್ವಗಳು ಸಾಕಷ್ಟು ಪ್ರಮಾಣದಲ್ಲಿ ಇದರಲ್ಲಿ ಕಂಡು ಬರುತ್ತದೆ.
ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿ ಜ್ಯುವೆಲ್ಲರ್ ಶಾಪ್ ನಲ್ಲಿ ದರೋಡೆ : 20 ಲಕ್ಷ ದೋಚಿದ ಖದೀಮರು
‘ಎಐಸಿಸಿ’ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಿಂದ ಭಾರತಕ್ಕೆ ಶಕ್ತಿ : ಡಿ.ಕೆ ಶಿವಕುಮಾರ್