ತಮಕೂರು: ರಾಜ್ಯದಲ್ಲಿ ಕಳೆದರೆಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಇದರಿಂದ ಅವಾಂತರ ಸೃಷ್ಟಿಯಾಗಿದ್ದು, ಜನರು ಕಂಗಾಲ ಆಗಿ ಹೋಗಿದ್ದಾರೆ.
ತುಮಕೂರು ನಗರದ ಹೊರವಲಯದಲ್ಲಿ ಹಾದು ಹೋಗಿರುವ ಬೆಂಗಳೂರು – ಪೂನಾ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ವರೆಗೂ ಮಳೆ ನೀರು ತುಂಬಿಕೊಂಡಿದ್ದು, ನದಿಯಂತೆ ಆಗಿದೆ. ಹೀಗಾಗಿ, ಹೆದ್ದಾರಿಯ ಮತ್ತೊಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.ರಾತ್ರಿಯಿಡೀ ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿದೆ.
ತುಮಕೂರು ತಾಲೂಕಿನ ಅಂಚಿಹಳ್ಳಿ ಗ್ರಾಮದಲ್ಲಿ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಕೆರೆ ಮಳೆಗೆ ಪೂರ್ತಿ ತುಂಬಿದ್ದು, ಹೆಚ್ಚುವರಿ ಕೆರೆ ನೀರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂದು ಸಂಗ್ರಹವಾಗಿದೆ. ಹೆದ್ದಾರಿಯಲ್ಲಿ ಸಂಗ್ರಹವಾಗಿರುವ ನೀರು ಹರಿದು ಹೋಗವಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.