ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ ಹೆಚ್ಚಳದ ಘೋಷಣೆ ಮಾಡಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಘೋಷಣೆ ಮಾಡಿದಂತ ಎಸ್ಸಿ, ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
(ಅಕ್ಟೋಬರ್ 20) ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಶೀಘ್ರದಲ್ಲೇ ಅಧಿಕೃತ ಆದೇಶ ಜಾರಿಗೆ ಬರಲಿದೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಕಾಯ್ದೆಗೆ ಅನುಮೋದನೆ ನೀಡಿದ ಬಳಿಕ, ಬೆಳಗಾವಿಯಲ್ಲಿ ನಡೆಯಲಿರುವಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧೇಯಕವನ್ನು ಸರ್ಕಾರ ಮಂಡಿಸಲಿದೆ ಎನ್ನಲಾಗಿದೆ. ಈ ಬಳಿಕ ಅಧಿಕೃತವಾಗಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳದ ಆದೇಶ ಹೊರ ಬೀಳಲಿದೆ ಎನ್ನಲಾಗಿದೆ.
WATCH VIDEO: ಆಂಬ್ಯುಲೆನ್ಸ್ ಸಿಗದಿದಕ್ಕೆ ಹೆಗಲ ಮೇಲೆ ಸೊಸೆ ಶವ ಹೊತ್ತುಕೊಂಡು ತಿರುಗಾಡಿದ ಮಾವ
BIGG NEWS : ಪಂಚಮಸಾಲಿ ಮೀಸಲಾತಿಗಾಗಿ ನಾಳೆ ‘ ಬೆಂಗಳೂರು ಚಲೋ ’ಕ್ಕೆ ನಿರ್ಧಾರ : ಜಯಮೃತ್ಯುಂಜಯ ಸ್ವಾಮೀಜಿ