ಬೆಂಗಳೂರು : ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಸುಗ್ರೀವಾಜ್ಞೆ ಮೂಲಕ ‘SC’, ‘ST’ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ನಿರ್ಧಾರ
ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ ಹೆಚ್ಚಳದ ಘೋಷಣೆ ಮಾಡಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ( Basavaraj Bommai ) ಘೋಷಣೆ ಮಾಡಿದಂತ ಎಸ್ಸಿ, ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಕಾಯ್ದೆಗೆ ಅನುಮೋದನೆ ನೀಡಿದ ಬಳಿಕ, ಬೆಳಗಾವಿಯಲ್ಲಿ ನಡೆಯಲಿರುವಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧೇಯಕವನ್ನು ಸರ್ಕಾರ ಮಂಡಿಸಲಿದೆ ಎನ್ನಲಾಗಿದೆ. ಈ ಬಳಿಕ ಅಧಿಕೃತವಾಗಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳದ ಆದೇಶ ಹೊರ ಬೀಳಲಿದೆ ಎನ್ನಲಾಗಿದೆ.
BREAKING NEWS: ನಟ ಚೇತನ್ ವಿರುದ್ಧ ಹಿಂದೂ ಜಾಗರಣೆ ವೇದಿಕೆಯಿಂದ ದೂರು ದಾಖಲು
BREAKING NEWS : ಸುಗ್ರೀವಾಜ್ಞೆ ಮೂಲಕ ‘SC’, ‘ST’ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ನಿರ್ಧಾರ