ಹಾಸನ: ಹಾಸನ : ವರ್ಷಕ್ಕೊಮ್ಮೆ ದರ್ಶನ ಕಲ್ಪಿಸುವ ಪ್ರಸಿದ್ಧ ಹಾಸನಾಂಬ ದೇವಿ ದರ್ಶನ ಪಡೆಯಲು ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
BIGG NEWS: ನೆಲಮಂಗಲದಲ್ಲಿ ಮಳೆಗೆ ಬರಗೂರು ಕಾಲೋನಿ ಸಂಪರ್ಕ ಕಡಿತ; ಶಾಲೆಗೆ ವಿದ್ಯಾರ್ಥಿಗಳು ಗೈರು
ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ 43 ವರ್ಷದ ಗಿರೀಶ್ ಮೃತಪಟ್ಟ ವ್ಯಕ್ತಿ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಗಿರೀಶ್ ಸರತಿ ಸಾಲಿನಲ್ಲಿ ನಿಂತಿದ್ದರು.ಸಾಮಾನ್ಯ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಹೃದಯಾಘಾತದಿಂದ ನೆಲಕ್ಕೆ ಬಿದ್ದಿದ್ದಾರೆ. ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದು, ಪೊಲೀಸರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.ಹಾಸನದ ಪೆನ್ಷನ್ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.