ಬೆಂಗಳೂರು: ರಾಜ್ಯ ಸರ್ಕಾರದಿಂದ ( SC ST ) ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ ಹೆಚ್ಚಳದ ಘೋಷಣೆ ಮಾಡಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ( Basavaraj Bommai ) ಘೋಷಣೆ ಮಾಡಿದಂತ ಎಸ್ಸಿ, ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
(ಅಕ್ಟೋಬರ್ 20) ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಶೀಘ್ರದಲ್ಲೇ ಅಧಿಕೃತ ಆದೇಶ ಜಾರಿಗೆ ಬರಲಿದೆ.
ಸುಗ್ರೀವಾಜ್ಞೆ ಮೂಲಕ Sಅ, Sಖಿ ಮೀಸಲಾತಿ ಏರಿಕೆಗೆ ಸಂಪುಟ ಅಸ್ತು ಎಂದಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಹೇಳಿದರು. ಎಸ್ಸಿಯಲ್ಲಿ 103 ಜಾತಿಗಳಿವೆ, ಎಸ್ಟಿಯಲ್ಲಿ 56 ಜಾತಿಗಳಿವೆ. ಸುಗ್ರೀವಾಜ್ಞೆ ಮೂಲಕ Sಅ, Sಖಿ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಮೊದಲು ಆಡಳಿತಾತ್ಮಕ ಆದೇಶಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಈಗ ಕಾನೂನು ಪರಿಮಿತಿಯಲ್ಲಿ ತೀರ್ಮಾನಿಸಿ ಸುಗ್ರೀವಾಜ್ಞೆಗೆ ನಿರ್ಧಾರ ಮಾಡಲಾಗಿದ್ದು ಬಳಿಕ ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ತೀರ್ಮಾನಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಕಾಯ್ದೆಗೆ ಅನುಮೋದನೆ ನೀಡಿದ ಬಳಿಕ, ಬೆಳಗಾವಿಯಲ್ಲಿ ನಡೆಯಲಿರುವಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧೇಯಕವನ್ನು ಸರ್ಕಾರ ಮಂಡಿಸಲಿದೆ ಎನ್ನಲಾಗಿದೆ. ಈ ಬಳಿಕ ಅಧಿಕೃತವಾಗಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳದ ಆದೇಶ ಹೊರ ಬೀಳಲಿದೆ ಎನ್ನಲಾಗಿದೆ.
ಇನ್ನೂ, ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಒಪ್ಪಿಗೆ ನೀಡಿದೆ.
BIG NEWS: ಇರಾನ್ನಲ್ಲಿ ಮತ್ತೊಂದು ಅಮಾನವೀಯ ಕೃತ್ಯ: ಭದ್ರತಾ ಪಡೆಗಳಿಂದ ಥಳಿಸಲ್ಪಟ್ಟ ಶಾಲಾ ವಿದ್ಯಾರ್ಥಿನಿ ಸಾವು